×
Ad

ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಗ್ರಾಮೀಣ ವರದಿಗಾರಿಕೆಗೆ ಪ್ರಶಸ್ತಿ

Update: 2016-04-26 12:38 IST

ಮಂಗಳೂರು, ಎ. 26: ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಗ್ರಾಮೀಣ ವರದಿಗಾರಿಕೆಗೆ ನೀಡುವ ಪದ್ಯಾಣ ಗೋಪಾಲಕೃಷ್ಣ ಪ್ರಶಸ್ತಿಯನ್ನು ಯುವ ಪತ್ರಕರ್ತ ಚಂದ್ರಹಾಸ ಚಾರ್ಮಾಡಿಗೆ ಇಂದು ನಗರದ ಪ್ರೆಸ್ ಕ್ಲಬ್ ನಲ್ಲಿ  ನಡೆಯಿತು.

 ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ  ಡಾ. ಶರಣಪ್ಪ ಎಸ್. ಡಿ. ಪ್ರಶಸ್ತಿ ಪ್ರಧಾನ ಮಾಡಿದರು.

 ಈ ಸಂದರ್ಭ ಮಂಗಳೂರಿನಿಂದ ಬೆಂಗಳೂರಿಗೆ ವರ್ಗಾವಣೆಗೊಂಡಿರುವ  ಪ್ರಜಾವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಸುರೇಶ್ ಬೆಳಗಜೆ ಅವರನ್ನು ಬೀಳ್ಕೊಡಲಾಯಿತು.  ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಪ.ಗೋ. ಅವರ ಬಗ್ಗೆ ಒಡನಾಟವನ್ನು ಹಂಚಿಕೊಂಡರು.

ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ವೇದಿಕೆಯಲ್ಲಿ ಉಪಸ್ಥಿತರಿದ್ದರು.

 ಹರಿ ಪ್ರಸಾದ್ ರೈ ಕಾರ್ಯಕ್ರಮ ನಿರೂಪಿಸಿದರು. ಶ್ರೀನಿವಾಸ್ ಇಂದಾಜೆ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News