ರಸ್ತೆ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ: ಸಚಿವ ಶಾಮನೂರು
Update: 2016-04-26 22:16 IST
ದಾವಣಗೆರೆ, ಎ.26: ನಗರದ ವಿವಿಧೆಡೆ ಆರಂಭಗೊಂಡಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸುವತ್ತ ಅಧಿಕಾರಿಗಳು ಗಮನಹರಿಸಿ ಜನತೆಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಾಮನೂರು ಶಿವಶಂಕರಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವರ ನಿವಾಸದಲ್ಲಿ ಕರೆದಿದ್ದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ನಗರದ ಪಿಬಿ ರಸ್ತೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದ್ದು, ಕಳೆದ ಒಂದು ವರ್ಷದಿಂದ ಕಾಮಗಾರಿ ನಡೆಯುತ್ತಲೇ ಇದೆ. ಹಾಗಾಗಿ, ಶೀಘ್ರವೇ ಕಾಮಗಾರಿಯನ್ನು ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಶಾಸಕ ಎಸ್.ಎಸ್. ಮಲ್ಲಿಕಾರ್ಜುನ್, ಮಹಾಪೌರ ಅಶ್ವಿನಿ ಪ್ರಶಾಂತ್, ಜಿಲ್ಲಾಧಿಕಾರಿ ಎಸ್.ಟಿ. ಅಂಜನ್ ಕುಮಾರ್, ಪಾಲಿಕೆ ಉಪ ಆಯುಕ್ತ ಮಹಾಂತೇಶ್, ರವೀಂದ್ರ, ಪಾಲಿಕೆ ಸದಸ್ಯ ದಿನೇಶ್ ಕೆ. ಶೆಟ್ಟಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ರಮೇಶ್ ಉಪಸ್ಥಿತರಿದ್ದರು.