ಜಿಪಂ ಮೀಸಲಿಗೆ ತಡೆ ನೀಡಲು ಹೈಕೋರ್ಟ್ ನಕಾರ
Update: 2016-04-26 23:37 IST
ಬೆಂಗಳೂರು, ಎ.26: ಜಿಲ್ಲಾ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಮೀಸಲು ಜಾರಿಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಈ ಸಂಬಂಧ ಸಲ್ಲಿಸಲಾಗಿದ್ದ 10್ಕಕೂ ಹೆಚ್ಚು ರಿಟ್ ಅರ್ಜಿಗಳನ್ನು ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಅವರಿದ್ದ ಏಕದದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು.
ಈ ಹಂತದಲ್ಲಿ ತಡೆ ನೀಡಲು ಸಾಧ್ಯವಿಲ್ಲ. ಅಧಿಸೂಚನೆ ಪ್ರಕಾರ ನಿಗದಿತ ದಿನಾಂಕದಂದು ಚುನಾವಣೆಗಳೂ ನಡೆಯಲಿ. ಆದಾಗ್ಯೂ ಈ ಮೀಸಲು ಈ ರಿಟ್ ಅರ್ಜಿಗಳ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ. ಈ ಸಂಗತಿಯನ್ನು ಪ್ರಾದೇಶಿಕ ಆಯುಕ್ತರು ಎಲ್ಲ ಅಭ್ಯರ್ಥಿಗಳ ಗಮನಕ್ಕೆ ತರತಕ್ಕದ್ದು ಎಂದು ಆದೇಶದಲ್ಲಿ ವಿವರಿಸಲಾಗಿದೆ.
ಜೂನ್ 8ಕ್ಕೆ ವಿಚಾರಣೆ ಮುಂದೂಡಲಾಗಿದೆ.