ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ: ಬಿಜೆಪಿ 12, ಕಾಂಗ್ರೆಸ್ 6 ಸ್ಥಾನಗಳಲ್ಲಿ ಗೆಲುವು
ಬಂಟ್ವಾಳ, ಎ. 27: ಕಳೆದ ಕೆಲವು ತಿಂಗಳುಗಳ ಹಿಂದೆ ಹೊಸದಾಗಿ ಅಸ್ತಿತ್ವಕ್ಕೆ ಬಂದ ವಿಟ್ಲ ಪಟ್ಟಣ ಪಂಚಾಯತ್‌ಗೆ ಎಪ್ರಿಲ್ 24ರಂದು ನಡೆದ ಚೊಚ್ಚಲ ಚುನಾವಣೆಯ ಸಂಪೂರ್ಣ ಫಲಿತಾಂಶ ಹೊರಬಿದ್ದಿದ್ದು 18 ಸ್ಥಾನಗಳ ಪೈಕಿ ಬಿಜೆಪಿ 12 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಹುಮತ ಪಡೆದುಕೊಂಡಿದ್ದು, ಆಡಳಿತದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತಗೊಂಡಿದೆ. ಕಾಂಗ್ರೆಸ್ 6 ಸ್ಥಾನಗಳಲ್ಲಿ ಗೆಲುವು ಪಡೆದುಕೊಂಡು ತೃಪ್ತಿ ಪಡೆದಿದೆ.
ವಿಜೇತ ಅಭ್ಯರ್ಥಿಗಳ ವಿವರ:
1ನೆ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಅರುಣ ಎಂ. ವಿಟ್ಲ 376 ಮತಗಳನ್ನು ಪಡೆದು ಜಯಗಳಿಸಿದರೆ ಅವರ ಪ್ರತಿಸ್ಪರ್ಥಿಗಳಾದ ಕಾಂಗ್ರೆಸ್ ಅಭ್ಯರ್ಥಿ ಕೊಲ್ಯ ಸೀತಾರಾಮ ಶೆಟ್ಟಿ 190 ಹಾಗೂ ಎಸ್‌ಡಿಪಿಐ ಅಭ್ಯರ್ಥಿ ಅಬ್ದುಲ್ ರಿಯಾರ್ 141 ಮತಗಳನ್ನು ಸೋಲು ಕಂಡಿದ್ದಾರೆ.
2ನೆ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಶ್ರೀಕೃಷ್ಣ ವಿಟ್ಲ 360 ಮತಗಳನ್ನು ಪಡೆದು ಜಯಗಳಿಸಿದರೆ ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ವಿಟ್ಲ 244 ಮತಗಳನ್ನು ಮಡೆದು ಸೋಲನುಭವಿಸಿದ್ದಾರೆ.
3ನೆ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ವಿ.ರಾಮದಾಸ ಶೆಣೈ 289 ಮತಗಳನ್ನು ಪಡೆದು ಜಯಗಳಿಸಿದರೆ ಅವರ ಪ್ರತಿಸ್ಪರ್ಧಿಗಳಾದ ಕಾಂಗ್ರೆಸ್ ಅಭ್ಯರ್ಥಿ ಅಶ್ರಫ್ ವಿ.ಕೆ.ಎಂ. 273 ಹಾಗೂ ಸಿಪಿಎಂ ಅಭ್ಯರ್ಥಿ ಹೈದರಾಲಿ ಮೇಗಿನಪೇಟೆ 46 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.
4ನೆ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಮಂಜುನಾಥ ಕಲ್ಲಕಟ್ಟ 329 ಮತಗಳನ್ನು ಪಡೆದು ಜಯಗಳಿಸಿದರೆ ಅವರ ಪ್ರತಿಸ್ಪರ್ಥಿಗಳಾದ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ರಹ್ಮಾನ್ ಕುರುಂಬಳ 234 ಹಾಗೂ ಸಿಪಿಎಂ ಅಭ್ಯರ್ಥಿ ಎ.ಜಿನ್ನಪ್ಪ ಸಾಲ್ಯಾನ್ ಅಬೀರಿ 22 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.
5ನೆ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಉಷಾ ಕೃಷ್ಣಪ್ಪ ಕೆ. 399 ಮತಗಳನ್ನು ಪಡೆದು ಜಯಗಳಿಸಿದರೆ ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ತೆರೆಜ ಡಿಸೋಜ 115 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.
6ನೆ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಲೋಕನಾಥ ಶೆಟ್ಟಿ 276 ಮತಗಳನ್ನು ಪಡೆದು ಜಯಗಳಿಸಿದರೆ ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕೊಲ್ಯ ಶ್ರೀನಿವಾಸ ಶೆಟ್ಟಿ ವಿಟ್ಲ 204 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.
7ನೆ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಜಯಂತ 299 ಮತಗಳನ್ನು ಪಡೆದು ಜಯಗಳಿಸಿದರೆ ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಸುಂದರ 139 ಹಗೂ ಪಕ್ಷೇತರ ಅಭ್ಯರ್ಥಿ ಗಂಗಾಧರ ನಾಯ್ಕ ಉಕ್ಕುಡ ಸರೋಳಿ 145 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.
8ನೆ ವಾರ್ಡ್‌ನ ಕಾಂಗ್ರೆಸ್ ಅಭ್ಯರ್ಥಿ ಸುನೀತ ಕೋಟ್ಯಾನ್ 226 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಅವರ ಪ್ರತಿಸ್ಪರ್ಥಿ ಬಿಜೆಪಿ ಅಭ್ಯರ್ಥಿ ಕೆ.ಮಾಲತಿ ಮೋನಪ್ಪ ಪೂಜಾರಿ 214 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.
9ನೆ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ರವಿಪ್ರಕಾಶ್ ಎಸ್. 510 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಸಂತ ಶೆಟ್ಟಿ ಕೂಡೂರು 209 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.
10ನೆ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಗೀತಾ ಪುರಂದರ 288 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ನಸೀಮಾ ಶೇಕ್ ಅಲಿ ಸೇರಾಜೆ 171 ಹಾಗೂ ಜೆಡಿಎಸ್ ಅಭ್ಯರ್ಥಿ ಮಾಲತಿ 44 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.
11ನೆ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಕೆ.ಚಂದ್ರಕಾಂತಿ ಶೆಟ್ಟಿ 335 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಸಂತಿ ವಿ.ರಾವ್ 142 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.
12ನೆ ವಾರ್ಡ್‌ನ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಕುಮಾರ ಶೆಟ್ಟಿ 251 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಅವರ ಪ್ರತಿಸ್ಪರ್ಧಿಗಳಾದ ಬಿಜೆಪಿ ಅಭ್ಯರ್ಥಿ ಜಗನ್ನಾಥ ಸಾಲಿಯಾನ್ ಎಚ್. 153 ಹಾಗೂ ಎಸ್‌ಡಿಪಿಐ ಅಭ್ಯರ್ಥಿ ಸಿರಾಜುದ್ದೀನ್ 47 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.
13ನೆ ವಾರ್ಡ್‌ನ ಕಾಂಗ್ರೆಸ್ ಅಭ್ಯರ್ಥಿ ದಮಯಂತಿ 264 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಅವರ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ತಿಮ್ಮಪ್ಪ 121 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.
14ನೆ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಸಂಧ್ಯಾ ಮೋಹನ್ ಎಸ್. 298 ಮತಗಳನ್ನು ಪಡೆದು ಜಯಗಳಿಸಿದರೆ ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಲೀಲಾವತಿ ಎಂ.ಸಿ. 149 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.
15ನೆ ವಾರ್ಡ್‌ನ ಕಾಂಗ್ರೆಸ್ ಅಭ್ಯರ್ಥಿ ಲತಾ ಅಶೋಕ್ ಪೂಜಾರಿ 353 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಅವರ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ರೇವತಿ 259 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.
16ನೆ ವಾರ್ಡ್‌ನ ಕಾಂಗ್ರೆಸ್ ಅಭ್ಯರ್ಥಿ ಅಬ್ಬೋಕರೆ ವಿ. 280 ಮತಗಳನ್ನು ಪಡೆದು ಜಯಗಳಿಸಿದರೆ ಅವರ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಪುರಂದರ 233 ಹಾಗೂ ಸಿಪಿಐಎಂ ಅಭ್ಯರ್ಥಿ ದೇಜಪ್ಪ ಪೂಜಾರಿ 11 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.
17ನೆ ವಾರ್ಡ್‌ನ ಬಿಜೆಪಿ ಅಭ್ಯರ್ಥಿ ಇಂದಿರಾ ಅಡ್ಡಾಳಿ 339 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಸುಮಿತ್ರ ವಿ.ಆಚಾರ್ಯ ಕೈಂತಿಲ 247 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.
18ನೆ ವಾರ್ಡ್‌ನ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ರಹೀಮಾನ್ ಹಸೈನಾರ್ 411 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಅವರ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಇಬ್ರಾಹೀಂ 76 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.
ಬುಧವಾರ ಬೆಳಗ್ಗೆ 8 ಗಂಟೆಗೆ ಸರಿಯಾಗಿ ಇಲ್ಲಿನ ಸೈಂಟ್ ರೀಟಾ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ಆರಂಭವಾಗಿದ್ದು 7:45ಕ್ಕೆ ಸರಿಯಾಗಿ ಅಭ್ಯರ್ಥಿಗಳು ಹಾಗೂ ಏಜೆಂಟ್‌ಗಳ ಸಮ್ಮುಖದಲ್ಲಿ ಮತ ಪೆಟ್ಟಿಗೆಗಳನ್ನು ಭದ್ರಪಡಿಸಿರುವ ಸ್ಟ್ರಾಂಗ್ ರೂಮಿನ ಬಾಗಿಲು ತೆರೆಯಲಾಯಿತು.
ಸರಿಯಾಗಿ 9 ಗಂಟೆಗೆ ಸಂಪೂರ್ಣ ಫಲಿತಾಂಶ ಪ್ರಕಟಗೊಂಡಿತು. ಮತ ಎಣಿಕೆ ಕಾರ್ಯ ಸಂಪೂರ್ಣ ಉಸ್ತುವಾರಿಯನ್ನು ಉಪ ತಹಶೀಲ್ದಾರ್ ಪಮೇಶ್ವರ್ ನಾಯಕ್ ವಹಿಸಿದ್ದರು.