×
Ad

ಮಂಗಳೂರು: ಗಾಂಜಾ ಸಹಿತ ಆರೋಪಿಗಳಿಬ್ಬರ ಸೆರೆ

Update: 2016-04-27 22:46 IST

ಮಂಗಳೂರು, ಎ.27: ಗಾಂಜಾ ಮಾರಾಟ ಮಾಡಲೆತ್ನಿಸಿದ ಇಬ್ಬರು ಆರೋಪಿಗಳನ್ನು ಬಂದರು ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಬಂದರಿನ ಅನ್ಸಾರಿ ರಸ್ತೆಯ ನಿವಾಸಿಗಳಾದ ರವೂಫ್ (36) ಫಾರೂಕ್ (47) ಎಂದು ಗುರುತಿಸಲಾಗಿದೆ.

ಬಂದರಿನ ಅನ್ಸಾರಿ ಕ್ರಾಸ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಬಂದರು ಠಾಣಾ ಇನ್ಸ್‌ಪೆಕ್ಟರ್ ಶಾಂತರಾಮ್ ಅವರು ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಸ್ಥಳದಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಮತ್ತಿಬ್ಬರು ಆರೋಪಿಗಳಾದ ರಹೀಂ ಮತ್ತು ಮುನೀರ್ ಎಂಬವರು ಸ್ಥಳದಿಂದ ಪರಾರಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News