×
Ad

ದಕ್ಷಿಣ ಕನ್ನಡ ಜಿಲ್ಲಾ ಆನ್‌ಲೈನ್ ಟ್ಯಾಕ್ಸಿ ಡ್ರೈವರ್ಸ್‌ ಆ್ಯಂಡ್ ಓನರ್ಸ್‌ ಎಸೋಸಿಯೇಶನ್ ಮಹಾಸಭೆ

Update: 2016-04-28 17:15 IST

ದಕ್ಷಿಣ ಕನ್ನಡ ಜಿಲ್ಲಾ ಆನ್‌ಲೈನ್ ಟ್ಯಾಕ್ಸಿ ಚಾಲಕರ ಮತ್ತು ಮಾಲಕರ ಸಂಘದ ಮಹಾಸಭೆಯು ಇಂದು ನಗರದ ವುಡ್‌ಲ್ಯಾಂಡ್ಸ್ ಹೊಟೇಲ್ ಸಭಾಂಗಣದಲ್ಲಿ ಜರಗಿತು. ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಹಾಗೂ ಡಿವೈಎಫ್‌ಐ ಜಿಲ್ಲಾ ಉಪಾಧ್ಯಕ್ಷ ಬಿ.ಕೆ. ಇಮ್ತಿಯಾಜ್ ಬದಲಾದ ಕಾಲಘಟ್ಟದಲ್ಲಿ ತಂತ್ರಜ್ಞಾನಗಳು ಸಾಮಾನ್ಯ ಜನರನ್ನು ವೇಗವಾಗಿ ತಲುಪುತ್ತಿದ್ದು, ಓನ್‌ಲೈನ್ ಟ್ಯಾಕ್ಸಿ ಸೇವೆಗಳು ಕೂಡಾ ಜನರಿಗೆ ಉಪಯುಕ್ತವಾಗಿದ್ದು ಬೆಳೆಯುತ್ತಿರುವ ಮಂಗಳೂರು ನಗರದಲ್ಲಿ ಓನ್‌ಲೈನ್ ಟ್ಯಾಕ್ಸಿ ಅಪರೇಟರ್‌ಗಳು ಕೂಡಾ ನಗರದ ಅಭಿವೃದ್ಧಿಗೆ ಪೂರಕವಾಗಿ ಸ್ಪಂದಿಸುತ್ತಾ ನಗರದ ಬೆಳವಣಿಗೆ ತಮ್ಮದೇ ಆದ ಕೊಡುಗೆಯನ್ನು ಕೊಡುತ್ತಿದ್ದು, ಸರಕಾರ ಆನ್‌ಲೈನ್ ಟ್ಯಾಕ್ಸಿ ಚಾಲಕರ ಸೇವೆಯನ್ನು ಗುರುತಿಸಬೇಕೆಂದು ಸರಕಾರವನ್ನು ಆಗ್ರಹಿಸಿದರು.

ಅರವಿಂದ ಜಿ. ಭಟ್ ಅಧ್ಯಕ್ಷತೆ ವಹಿಸಿದರು. ಪ್ರಧಾನ ಕಾರ್ಯದರ್ಶಿ ಸಾದಿಕ್ ಕಣ್ಣೂರು ವಾರ್ಷಿಕ ವರದಿ ಮಂಡಿಸಿದರೆ ಜೊತೆ ಕಾರ್ಯದರ್ಶಿ ರಾಫಿ ಕಣ್ಣೂರು ಲೆಕ್ಕಪತ್ರ ಮಂಡಿಸಿದರು. ಈ ಸಂದರ್ಭ ಮುಂದಿನ ಸಾರಿಗೆ ನೂತನ ಸಮಿತಿ ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News