ಅಪರಿಚಿತ ವಾಹನ ಢಿಕ್ಕಿ: ಯುವತಿ ಮೃತ್ಯು
Update: 2016-04-28 22:04 IST
ಕುಶಾಲನಗರ, ಎ.28: ಇಲ್ಲಿನ ಸಮೀಪದ ಆನೆಕಾಡು ಮೀಸಲು ಅರಣ್ಯ ವ್ಯಾಪ್ತಿಯ ರಾಜ್ಯ ಹೆದ್ದಾರಿಯಲ್ಲಿ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಯುವತಿಯೋರ್ವಳು ಮೃತಪಟ್ಟ ಘಟನೆ ವರದಿಯಾಗಿದೆ.
7ನೆ ಹೊಸಕೋಟೆ ಗ್ರಾಮದ ನಿವಾಸಿ ರಶ್ಮಿ(25)ಮೃತ ಯುವತಿ. ಈಕೆ ಎಂದಿನಂತೆ ತನ್ನ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಪರಿಣಾಮ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈಕೆ ಪತಿ ಹಾಗೂ ಮಗಳನ್ನು ಅಗಲಿದ್ದಾರೆ.
ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪರಾರಿಯಾದ ವಾಹನಕ್ಕೆ ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.