×
Ad

ಹಳೆ ಪ್ರಕರಣದ ಆರೋಪಿಯ ಬಂಧನ

Update: 2016-04-28 23:53 IST

ಬಂಟ್ವಾಳ, ಎ.28: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶಕ್ಕೆ ಪಲಾಯನಗೈದಿದ್ದ ಆರೋಪಿಯೋರ್ವನನ್ನು ಬ್ಯುರೋ ಆಫ್ ಇಮಿಗ್ರೇಷನ್‌ನ ಅಧಿಕಾರಿಗಳು ಹಿಡಿದು ವಿಟ್ಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬುಧವಾರ ರಾತ್ರಿ ನಡೆದಿದೆ.

ಕನ್ಯಾನ ಮಂಡ್ಯೂರು ನಿವಾಸಿ ಇಸ್ಮಾಯೀಲ್ ಆಸಿಫ್ (24) ಬಂಧಿತ ಆರೋಪಿ. ಈತನ ವಿರುದ್ಧ 2014ರ ಮಾರ್ಚ್ 17ರಂದು ಪತ್ನಿಗೆ ಹಿಂಸೆ, ಹಲ್ಲೆ ಮತ್ತು ಬೆದರಿಕೆ ಹಾಕಿದ ಆರೋಪದಲ್ಲಿ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಈತ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಬಳಿಕ ನ್ಯಾಯಾಲಯ ನಾಲ್ಕು ಬಾರಿ ವಾರಂಟ್ ಹೊರಡಿಸಿದರೂ ಈತ ಒಮ್ಮೆಯೂ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶಕ್ಕೆ ಪಲಾಯನಗೈದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶರಣಪ್ಪಫೆ.16ರಂದು ಆರೋಪಿಯನ್ನು ಇಲಾಖೆಗೆ ಹಸ್ತಾಂತರಿಸುವಂತೆ ಲುಕ್‌ಔಟ್ ಸರ್ಕ್ಯುಲರ್ ನೋಟಿಸ್ ಹೊರಡಿಸಿದ್ದರು. ಬುಧವಾರ ರಾತ್ರಿ ದುಬೈನಿಂದ ಮಂಗಳೂರಿಗೆ ಬಂದಿಳಿದ ಈತನನ್ನು ಬ್ಯುರೋ ಆಫ್ ಇಮಿಗ್ರೇಷನ್‌ನ ಅಧಿಕಾರಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ರಾತ್ರಿಯೇ ಬಂಟ್ವಾಳ ಜೆಎಂಎಫ್‌ಸಿ ಹಿರಿಯ ಸಿವಿಲ್ ನ್ಯಾಯಾಧೀಶ ಚಂದ್ರಶೇಖರ ಯು.ರ ಮನೆಗೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News