×
Ad

ನಿಗದಿತ ವೇಳಾಪಟ್ಟಿಯಂತೆ ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್); ಸುಪ್ರೀಂ ಆದೇಶ

Update: 2016-04-29 16:33 IST

ಹೊಸದಿಲ್ಲಿ, ಎ.29: ಎರಡು ಹಂತದಲ್ಲಿ ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಪ್ರವೇಶ ಪರೀಕ್ಷೆ  (ನೀಟ್) ನಡೆಸುವ  ಆದೇಶದ ಮರುಪರಿಶೀಲನೆಗೆ ಸಲ್ಲಿಸಿದ್ದ ಕೇಂದ್ರ ಸರಕಾರದ ಮನವಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್‌ ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಪ್ರವೇಶ ಪರೀಕ್ಷೆ  ನಿಗದಿತ ವೇಳಾಪಟ್ಟಿಯಂತೆ ನಡೆಯಲಿದೆ ಎಂದು ಇಂದು  ಸ್ಪಷ್ಟಪಡಿಸಿದೆ.
ಎರಡು ಹಂತಗಳಲ್ಲಿ ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್)  ನಡೆಸುವಂತೆ ಸುಪ್ರೀಂ ಕೋರ್ಟ್‌ ನೀಡಿದ್ದ ಆದೇಶವನ್ನು ಮರುಪರಿಶೀಲಿಸಲು ಕೇಂದ್ರ ಸರಕಾರ ಶುಕ್ರವಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠ ಆಲಿಸಲಿಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ.
 ಎರಡು ಹಂತಗಳಲ್ಲಿ ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ನಡೆಸುವ ಬಗ್ಗೆ ಸುಪ್ರೀಂಕೋರ್ಟ್ ನೀಡಿದ್ದ ಆದೇಶವನ್ನು ಮರುಪರಿಶೀಲಿಸುವಂತೆ ಕೇಂದ್ರ  ಸರಕಾರ  ಶುಕ್ರವಾರ ಸುಪ್ರೀಂಕೋರ್ಟಿಗೆ ಮನವಿ ಸಲ್ಲಿಸಿತ್ತು.
 ಕೇಂದ್ರ ಸರಕಾರದ ಅಟಾರ್ನಿ  ಜನರಲ್ ಮುಕುಲ್ ರೋಹ್ಟಗಿ ಅವರು ಸುಪ್ರೀಂಕೋರ್ಟ್‌‌ನ ನ್ಯಾಯಮೂರ್ತಿ ಎ.ಆರ್‌.ದೇವ್‌ ಮತ್ತು ಎ.ಕೆ.ಗೋಯಲ್‌ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ಶುಕ್ರವಾರ ಮಾಡಿರುವ ಮನವಿಯಲ್ಲಿ  ಮೇ 2ರಂದು ಮತ್ತು ಮೇ 24ರಂದು ಎರಡು ಹಂತಗಳಲ್ಲಿ ’ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಪ್ರವೇಶ ಪರೀಕ್ಷೆ  ನಡೆಸುವ ಬದಲಿಗೆ ಜುಲೈ 24ರಂದು ಒಂದೇ ದಿನ  ಪರೀಕ್ಷೆ  ನಡೆಸುವಂತೆ ಸಲಹೆ ನೀಡಿದ್ದರು. 
"ಸುಪ್ರೀಂ ಕೋರ್ಟ್‌ ಗುರುವಾರ ನೀಡಿರುವ ಆದೇಶದಂತೆ ಎರಡು ಹಂತದ ಏಕಮುಖ ಅರ್ಹತಾ ಪ್ರವೇಶ ಪರೀಕ್ಷೆ ಏರ್ಪಡಿಸಿದರೆ, ಹಲವು ಸಮಸ್ಯೆಗಳು ಎದುರಾಗುತ್ತವೆ. ಹೀಗಾಗಿ ತೀರ್ಪಿನಲ್ಲಿ   ಬದಲಾವಣೆ ಅಗತ್ಯ" ಎಂದು ನ್ಯಾಯಾಲಯಕ್ಕೆ  ಸಲ್ಲಿಸಿರುವ ಅರ್ಜಿಯಲ್ಲಿ ಸರಕಾರದ ನಿಲುವನ್ನು ವ್ಯಕ್ತಪಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News