ಅಕ್ರಮ ಮರಳು ಸಾಗಾಟ: ಆರೋಪಿಗಳಿಗೆ ಜಾಮೀನು

Update: 2016-04-29 12:01 GMT

ಉಪ್ಪಿನಂಗಡಿ, ಎ.29: ಅಕ್ರಮ ಮರಳು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರಿಂದ ಬಂಧಿತರಾಗಿದ್ದ ಮೂವರು ಆರೋಪಿಗಳನ್ನು ಶುಕ್ರವಾರ ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದೆ.

 ಕಳೆದ ಎ.24ರಂದು ಬೆಳಗಿನ ಜಾವ ಮೂರರ ಸುಮಾರಿಗೆ ಪ್ರೊಬೆಷನರಿ ಎಎಸ್ಪಿಲಕ್ಷ್ಮಣ್ ನಿಂಬರ್ಗಿ ನೇತೃತ್ವದಲ್ಲಿ ಕರ್ವೇಲ್ ಬಳಿ ವಾಹನ ತಪಾಸಣೆ ನಡೆಸಿದ ಉಪ್ಪಿನಂಗಡಿ ಪೊಲೀಸರು ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಎರಡು ಲಾರಿಗಳನ್ನು ವಶಪಡಿಸಿಕೊಂಡು ಅದರಲ್ಲಿದ್ದ ಮೂವರನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದರು. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿಗಳ ಪರ ನ್ಯಾಯವಾದಿಗಳು ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ವಾದ ವಿವಾದವನ್ನು ಆಲಿಸಿದ ದ.ಕ. ಜಿಲ್ಲಾ ಪ್ರಧಾನ ಜಿಲ್ಲಾ ನ್ಯಾಯಾಧೀಶರ ನ್ಯಾಯಾಲಯ ಮೂವರು ಆರೋಪಿಗಳನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಿ ತೀರ್ಪು ನೀಡಿದೆ.

ಆರೋಪಿಗಳ ಪರವಾಗಿ ನ್ಯಾಯವಾದಿಗಳಾದ ಅನಿಲ್ ಕುಮಾರ್ ಉಪ್ಪಿನಂಗಡಿ ಹಾಗೂ ಸಂದೇಶ್ ನಟ್ಟಿಬೈಲ್ ವಾದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News