×
Ad

ಸರಕಾರಕೆ್ಕ 20 ಕೋಟಿ ರೂ. ಪ್ರಸಾ್ತವನೆ ಸಲಿ್ಲಕೆಗೆ ನಿರ್ಧಾರ: ಸಚಿವ ಕಿಮ್ಮನೆ ರತ್ನಾಕರ

Update: 2016-04-29 22:06 IST

ಶಿವಮೊಗ್ಗ, ಎ. 29: ಜಿಲ್ಲೆಯಲ್ಲಿ ಉದ್ಭವಿಸಿರುವ ಬರ ನಿರ್ವ ಹಣೆಗೆ 20 ಕೋಟಿ ರೂ. ಅಗತ್ಯವಿದ್ದು, ಈ ಅನು ದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಕೋರಿ ಪ್ರಸ್ತಾವನೆಯನ್ನು ತಯಾರಿಸಿ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ ಹೇಳಿದ್ದಾರೆ. ಶುಕ್ರವಾರ ಜಿಲ್ಲೆಯ ಸಾಗರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಲಾಗಿದ್ದ ಸಾಗರ ತಾಲೂಕು ಬರ ಹಾಗೂ ಕುಡಿಯುವ ನೀರಿನ ಸರಬರಾಜು ಸಂಬಂಧ ವಿವಿಧ ಇಲಾಖಾ ವತಿಯಿಂದ ಕೈಗೊಂಡ ಕ್ರಮಗಳ ಕುರಿತು ಅಧಿಕಾರಿಗಳ ಸಭೆಯ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದರು.

ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲ್ಲಿ ಈಗಾಗಲೇ ಬರ ಪರಿಸ್ಥಿತಿ ಕುರಿತು ಸಂಬಂಧಿಸಿದ ಅಧಿಕಾರಿ ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆಯನ್ನು ನಡೆಸಲಾಗಿದ್ದು, ಪ್ರತೀ ತಾಲೂಕಿಗೆ 3 ರಿಂದ 5 ಕೋಟಿ ರೂ. ಹಣ ಬರ ನಿರ್ವಹಣೆಗೆ ಅಗತ್ಯವಿ ರುವುದಾಗಿ ತಿಳಿಸಿದರು.

ಜಿಲ್ಲೆಯಲ್ಲಿ ಅಗತ್ಯವಿರುವೆಡೆ ನೂತನ ಬೋರ್‌ವೆಲ್‌ಗಳು, ತುರ್ತು ಕುಡಿಯುವ ನೀರಿನ ಕಾಮಗಾರಿಗಳಿಗೆ ಪೈಪ್‌ಲೈನ್ ಅಳವಡಿಕೆ, ಅಗತ್ಯ ಇರುವ ಕಡೆಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಇನ್ನಿತರೆ ವಿಷಯಗಳ ಕುರಿತು ಗಮನಹರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಬರ ನಿರ್ವ ಹಣೆಗೆ ಸಂಬಂಧ ಪಟ್ಟಂತೆ ಪ್ರತೀ ತಾಲೂಕಿನಿಂದಲೂ ಪ್ರತ್ಯೇಕ ವರದಿಯನ್ನು ತಯಾರಿಸಲು ಅಧಿಕಾರಿ ಗಳಿಗೆ ತಿಳಿಸಲಾಗಿದೆ ಎಂದರು. ಈಗಾಗಲೇ ಜಿಲ್ಲೆಯ ಎಲ್ಲ ತಾಲೂಕುಗಳಿಗೂ ಕುಡಿಯುವ ನೀರು ಸೇರಿದಂತೆ ತುರ್ತು ಸ್ಥಿತಿ ಎದುರಿಸಲು 50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾಗರ ತಾಲೂಕಿಗೆ 40 ಲಕ್ಷ ರೂ. ಹಾಗೂ ಹೊಸ ನಗರ ತಾಲೂಕಿನ ಎರಡು ಹೋಬಳಿಗೆ 10 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದವರು ನುಡಿದರು. ಬರಪೀಡಿತ ತಾಲೂಕು ಎಂದು ಘೋಷಣೆಯಾಗಿರುವ ಸೊರಬ ತಾಲೂಕಿಗೆ ಮೊದಲ ಹಂತದಲ್ಲಿ 1.50 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಪುನಃ 50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಕಳೆದ ಸಾಲಿನಲ್ಲಿ ಮಳೆ ಕಡಿಮೆಯಾಗಿರುವುದರಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಕುಡಿಯುವ ನೀರು ಸೇರಿದಂತೆ ಅಗತ್ಯ ಕಾಮಗಾರಿ ಕೈಗೊ ಳ್ಳಲು ಹಣಕಾಸಿನ ಕೊರತೆ ಇಲ್ಲ ಎಂದು ತಿಳಿಸಿದರು. ಶಿಕಾರಿಪುರವನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡುವಂತೆ ಸರಕಾರಕ್ಕೆ ಶಿಫಾರಸು ಮಾಡಲಾಗಿದೆ. ಜುಲೈ ಮತ್ತು ಆಗಸ್ಟ್ ತಿಂಗಳಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಹಾಗೂ ಸಕಾಲದಲ್ಲಿ ಮಳೆಯಾಗದಿರುವುದರಿಂದ ಬೆಳೆ ನಷ್ಟವಾಗಿದೆ ಎಂದರು. ಈ ಸಂದರ್ಭದಲ್ಲಿ ಸಭೆಯಲ್ಲಿ ಉಪಸ್ಥಿತರಿದ್ದ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರು ಮಾತನಾಡಿ, ತಾಲೂಕಿನಲ್ಲಿ 499 ತೆರೆದ ಬಾವಿಯಿದ್ದು, ಅವೆಲ್ಲ ಬಿಸಿಲಿನ ಝಳಕ್ಕೆ ಒಣಗಿ ಹೋಗಿವೆ. ಗ್ರಾಮಾಂತರ ಪ್ರದೇಶದಲ್ಲಿ ನೀರಿನ ಸಮಸ್ಯೆ ಉದ್ಭವಿಸಿದೆ. ಜನರಿಗೆ ಕುಡಿಯುವ ನೀರು ಪೂರೈಕೆ ಮಾಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದ್ದು, ಅಗತ್ಯ ಇರುವ ಕಡೆಗಳಲ್ಲಿ ಕೊಳವೆ ಬಾವಿಯನ್ನು ತೆರೆಯುವುದು, ಪೈಪ್‌ಲೈನ್ ಅಳವಡಿಸಲು ಸೂಚನೆ ನೀಡಿದ್ದೇನೆ. ಈ ಸಂದರ್ಭದಲ್ಲಿ ಅಧಿಕಾರಿಗಳು ಸಮರೋಪಾದಿಯಲ್ಲಿ ಪರಿಹಾರ ಕೆಲಸ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ವಿ.ಪಿ.ಇಕ್ಕೇರಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಉಪವಿಭಾಗಾಧಿಕಾರಿ ಡಿ.ಎಂ.ಸತೀಶಕುಮಾರ್, ತಹಶೀಲ್ದಾರ್ ಎನ್.ಟಿ.ಧರ್ಮೋಜಿರಾವ್, ತಾಪಂ ಕಾರ್ಯನಿರ್ವಹಣಾಧಿಕಾರಿ ಸಿದ್ದಲಿಂಗಯ್ಯ, ಜಿಪಂ ಸದಸ್ಯೆ ಅನಿತಾಕುಮಾರಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News