ಮೂರು ವೈದ್ಯಕೀಯ ಕಾಲೇಜು ಸ್ಥಾಪನೆ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್

Update: 2016-04-29 18:06 GMT

ಕಲಬುರಗಿ, ಎ. 29: ರಾಜ್ಯದಲ್ಲಿ ಮೂರು ನೂತನ ವೈದ್ಯಕೀಯ ಕಾಲೇಜು ಸ್ಥಾಪಿಸಲು ರಾಜ್ಯ ಸರಕಾರ ಮುಂದಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಶುಕ್ರವಾರ ನಗರದಲ್ಲಿ ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮೂರು ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಗೆ ರಾಜ್ಯ ಸರಕಾರ ಮುಂದಾಗಿದ್ದು, ಈ ಕಾಲೇಜು ಸ್ಥಾಪನೆಯಿಂದ 450 ಹೆಚ್ಚುವರಿ ಸೀಟ್‌ಗಳು ಲಭ್ಯವಾಗಲಿವೆ ಎಂದು ಹೇಳಿದರು.
ಚಾಮರಾಜನಗರ, ಕಾರವಾರ ಮತ್ತು ಕೊಡಗು ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ಅನುಮತಿ ನೀಡಿದೆ ಎಂದ ಅವರು, ರಾಜ್ಯದಲ್ಲಿ ಮೂರು ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಯ ನಿರ್ಧಾರ ಕೈಗೊಂಡಿರುವುದು ನಮ್ಮ ಸರಕಾರದ ಅಲ್ಪಾವಧಿಯಲ್ಲೇ ಅತೀ ದೊಡ್ಡ ಸಾಧನೆಯಾಗಿದೆ ಎಂದು ಹೇಳಿದರು.
ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸರಕಾರದ ಕೊಡುಗೆಯಾಗಿ ಎಲ್ಲ ಸೀಟುಗಳು ಸರಕಾರದ ಕೋಟಾ ವ್ಯಾಪ್ತಿಗೊಳಪಡುತ್ತವೆ. ಬೆಂಗಳೂರು ಮೆಡಿಕಲ್ ಕಾಲೇಜಿಗೆ ಖಾಯಂ ಮಾನ್ಯತೆ ದೊರೆತಿದೆ. ಮೈಸೂರು, ಹುಬ್ಬಳ್ಳಿ ಮತ್ತು ಬಳ್ಳಾರಿ ಮೆಡಿಕಲ್ ಕಾಲೇಜುಗಳಿಗೂ ಖಾಯಂ ಮಾನ್ಯತೆ ದೊರೆಯುವ ವಿಶ್ವಾಸವಿದೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News