×
Ad

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

Update: 2016-04-29 23:41 IST

ಬೆಂಗಳೂರು, ಎ. 29: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಮಹಾರಾಷ್ಟ್ರ ಮೂಲದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಎ.25ರಂದು ಇಲ್ಲಿನ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
 

ಅತ್ಯಾಚಾರ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಇಲ್ಲಿನ ಮಂಗಮ್ಮನ ಪಾಳ್ಯದ ನಿವಾಸಿಗಳಾದ ದೀಪಕ್ ಮತ್ತು ರಮೇಶ್ ಎಂದು ಗುರುತಿಸಲಾಗಿದ್ದು, ಈಗಾಗಲೇ ಬೊಮ್ಮನಹಳ್ಳಿ ಪೊಲೀಸರು ಇವರನ್ನು ಬಂಧಿಸಿದ್ದಾರೆ. ಬಸ್‌ವೊಂದರಲ್ಲಿ ಮಹಾರಾಷ್ಟ್ರದ ಯುವತಿಯನ್ನು ಪರಿಚಯ ಮಾಡಿಕೊಂಡ ದೀಪಕ್, ಆಕೆಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಆಕೆಯ ಬಳಿ ಸಾಲ ಮಾಡಿದ್ದ. ಆದರೆ, ಆರು ತಿಂಗಳು ಕಳೆದರೂ ಸಾಲ ಮರುಪಾವತಿ ಮಾಡಿರಲಿಲ್ಲ. ಕೆಲಸ ಸಿಗದೆ ಕಂಗಾಲಾಗಿದ್ದ ಯುವತಿ ತನ್ನ ಹಣವನ್ನು ವಾಪಸ್ ಕೇಳಿದ್ದಾಳೆ. ಆಗ ದೀಪಕ್ ಹಣ ನೀಡುವುದಾಗಿ ತಿಳಿಸಿ ತನ್ನ ಸ್ನೇಹಿತನ ಮನೆಗೆ ಬಾ ಎಂದು ಕರೆದಿದ್ದಾನೆ. ಆಕೆ ಹಣ ಸ್ವೀಕರಿಸಲು ಮನೆಗೆ ತೆರಳಿದ್ದಾಗ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ ಎಂದು ದೂರಿನಲ್ಲಿ ಹೇಳಿದ್ದು, ಈ ಸಂಬಂಧ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News