×
Ad

‘ಮೇ 2: ಧಾರ್ಮಿಕ ಪರಿಷತ್ ಸಭೆ’

Update: 2016-04-29 23:48 IST

ಬೆಳ್ತಂಗಡಿ, ಎ.29: ರಾಜ್ಯದ ಎಲ್ಲಾ ದೇವಸ್ಥಾನಗಳ ಅಭಿವೃದ್ಧಿಯ ಬಗ್ಗೆ ಚಿಂತನೆ ನಡೆಸಲು ರಾಜ್ಯ ಧಾರ್ಮಿಕ ಪರಿಷತ್‌ನ ಸಭೆ ಮೇ 2ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ರಾಜ್ಯ ಮುಜರಾಯಿ ಇಲಾಖಾ ಸಚಿವ ಮನೋಹರ ತಹಸೀಲ್ದಾರ್ ಪ್ರಕಟಿಸಿದರು.

ಶುಕ್ರವಾರ ಧರ್ಮಸ್ಥಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಬ್ರಹ್ಮಣ್ಯ ಕ್ಷೇತ್ರದ ಅಭಿವೃದ್ಧಿಗೆ 180 ಕೋಟಿ ರೂ.ಗಳ ಮಾಸ್ಟರ್ ಪ್ಲಾನ್ ತಯಾರಿಸಲಾಗಿದೆ. ಈಗಾಗಲೇ 50 ಕೋಟಿ ರೂ. ಬಿಡುಗಡೆಯಾಗಿದೆ. ರಾಜ್ಯದಲ್ಲಿ ಅತಿ ಹೆಚ್ಚು ಆದಾಯ ತರುವ ದೇವಸ್ಥಾನಗಳಿಗೆ ಆಗಮಿಸುವ ಭಕ್ತರಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರಕಾರ ಸಿದ್ಧವಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಪ್ರಯತ್ನಗಳು ನಡೆಯುತ್ತಿವೆ. ರಾಜ್ಯದ ‘ಸಿ’ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿಗೆ 50 ಕೋಟಿ ರೂ. ಅನುದಾನವನ್ನು ಬಜೆಟ್ ಮೂಲಕ ಒದಗಿಸಲಾಗಿದೆ ಎಂದರು.
ಈ ಸಂದರ್ಭ ಶಾಸಕ ಕೆ. ವಸಂತ ಬಂಗೇರ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News