×
Ad

ಮೇ 22ರಂದು ಯಕ್ಷಧ್ರುವ ಪಟ್ಲ ಸಂಭ್ರಮ

Update: 2016-04-30 14:07 IST

ಮಂಗಳೂರು,ಎ.30: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಮೇ 22ರಂದು ಯಕ್ಷಧ್ರುವ ಪಟ್ಲ ಸಂಭ್ರಮ 2016 ಎಂಬ ವಿಶೇಷ ಕಾರ್ಯಕ್ರಮ ನಗರದ ಪುರಭವನದಲ್ಲಿ ಆಯೋಜಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಟ್ರಸ್ಟ್‌ನ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಕಾರ್ಯಕ್ರಮದಲ್ಲಿ ವಿವಿಧ ಯಕ್ಷ ಸಾಂಸ್ಕೃತಿಕ ಕಾರ್ಯಕ್ರಮಗಳ ಜತೆ ವಿವಿಧ ಸೇವಾ ಯೋಜನೆಗಳು ಅನುಷ್ಠಾನಗೊಳ್ಳಲಿವೆ ಎಂದರು.

ಟ್ರಸ್ಟಿನ ಸದಸ್ಯರು ಹಾಗೂ ಯಕ್ಷಾಭಿಮಾನಿಗಳಿಗಾಗಿ ರಕ್ತದಾನ ಶಿಬಿಪರ, ಕಲಾವಿದರು ಮತ್ತು ಅವರ ಕುಟುಂಬದವರಿಗೆ ಉಚಿತ ವೈದ್ಯಕೀಯ ತಪಾಸಣೆಯನ್ನು ಆಯೋಜಿಸಲಾಗಿದೆ. ಯಕ್ಷಗಾನ ಕಲಾವಿದರ ಮಕ್ಕಳಿಗೆ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಹಾಗೂ ಅಶಕ್ತ ಕಲಾವಿದರ ಮಕ್ಕಳಿಗೆ ವಿದ್ಯಾರ್ಥಿ ವೇತನ, ದ್ವಿತೀಯ ಪಿಯುಸಿಯಲ್ಲಿ ಶೇ. 90ಕಿಕಂತ ಅಧಿಕ ಅಂಕ ಗಳಿಸಿದ ಕಲಾವಿದರ ಮಕ್ಕಳಿಗೆ ಬಂಗಾರದ ಪದಕ ನೀಡಿ ಗೌರವಿಸಲಾಗುವುದು. 15 ಮಂದಿ ಕಲಾವಿದರಿಗೆ ತಲಾ 50,000 ರೂ.ನಂತೆ ಸಹಾಯಧನ ಒದಗಿಸಲಾಗುವುದು. ಇದೇ ವೇಳೆ ಟ್ರಸ್ಟ್‌ಗೆ ಅಧಿಕ ಸಂಖ್ಯೆಯಲ್ಲಿ ಸದಸ್ಯರನ್ನು ಸೇರ್ಪಡೆಗೊಳಿಸುವ ಉದ್ದೇಶದಂದ 1000 ರೂ. ಸದಸ್ಯತ್ವ ಶುಲ್ಕದೊಂದಿಗೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.

ಟ್ರಸ್ಟ್‌ನ ಸದಸ್ಯರಾಗಲು ಬಯಸುವವರು, ರಕ್ತದಾನ, ವೈದ್ಯಕೀಯ ತಪಾಸಣಾ ಶಿಬಿರದಲ್ಲಿ ಭಾಗವಹಿಸುವವರು ಹಾಗೂ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಸಲ್ಲಿಸುವವರು ಟ್ರಸ್ಟ್‌ನ ಕೇಂದ್ರ ಕಚೇರಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್, ಶಾಪ್ ನಂ. 16 ಮತ್ತು 17, 2ನೆ ಮಹಡಿ, ಎಂಪಾಯರ್ ಮಹಲ್, ಎಂ.ಜಿ. ರಸ್ತೆ, ಮಂಗಳೂರು ದೂ.ಸಂ. 9845172865 ಗೆ ಸಂಪರ್ಕಿಸಬಹುದು.

ಗೋಷ್ಠಿಯಲ್ಲಿ ಟ್ರಸ್ಟ್‌ನ ಕೋಶಾಧ್ಯಕ್ಷ ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ, ರವೀಶ್ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News