ಆರ್ಯಾಪು ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ

Update: 2016-04-30 13:50 GMT

ಪುತ್ತೂರು, ಎ.30: ಆರ್ಯಾಪು ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನೆಯು ಇಂದು ನಡೆಯಿತು.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೂತನ ಕಟ್ಟಡವನ್ನು ಹಾಗೂ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಿಪಂ ಅಧ್ಯಕ್ಷೆ ಮೀನಾಕ್ಷಿ ಬಾಬು, ಸಹಕಾರ ಸಂಘದ ದಾಸ್ತಾನು ಮಳಿಗೆಯನ್ನು ಉದ್ಘಾಟಿಸಿದರು. ಭದ್ರತಾ ಕೊಠಡಿಯ ಉದ್ಘಾಟನೆಯನ್ನು ರಾಜ್ಯ ಸಂಸದೀಯ ಕಾರ್ಯದರ್ಶಿ, ಶಾಸಕಿ ಶಕುಂತಳಾ ಟಿ.ಶೆಟ್ಟಿ ನೆರವೇರಿಸಿದರು. ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಸಂಘದ ಮಾಜಿ ಅಧ್ಯಕ್ಷರನ್ನು ಸನ್ಮಾನಿಸಿದರು.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ ಎಂ.ಎನ್.ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ನಗರಸಭಾ ಅಧ್ಯಕ್ಷೆ ಜಯಂತಿ ಬಲ್ನಾಡು, ಆರ್ಯಾಪು ಗ್ರಾಪಂ ಅಧ್ಯಕ್ಷೆ ಗೀತಾ ಮರಿಕೆ, ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ. ಜಯರಾಮ ರೈ, ತಾಪಂ ಸದಸ್ಯ ಸಾಜ ರಾಧಾಕೃಷ್ಣ ಆಳ್ವ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಸಹಕಾರಿ ಸಂಘಗಳ ಉಪನಿಬಂಧಕ ಬಿ.ಕೆ ಸಲೀಂ, ಆರ್ಯಾಪು ಸಿಎ ಬ್ಯಾಂಕ್‌ನ ಉಪಾಧ್ಯಕ್ಷ ಸದಾನಂದ ಶೆಟ್ಟಿ ಕೂರೇಲು, ಸಂಘದ ನಿರ್ದೇಶಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚಂದ್ರಕಲಾ, ಮೀನಾಕ್ಷಿ ಪ್ರಾರ್ಥಿಸಿದರು. ಸಿಎ ಬ್ಯಾಂಕ್‌ನ ಅಧ್ಯಕ್ಷ ಮುಹಮ್ಮದಾಲಿ ಸ್ವಾಗತಿಸಿದರು. ವೆಂಕಟೇಶ್ ಅನಂತಾಡಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News