ಮಂಗಳೂರು: ಚಾಲಕನಿಗೆ ಹೃದಯಾಘಾತ - ಕಂದಕಕ್ಕಿಳಿದ ಬಸ್
Update: 2016-04-30 19:58 IST
ಮಂಗಳೂರು, ಎ. 30: ಚಾಲಕನಿಗೆ ಹೃದಯಾಘಾತವಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಕಂದಕಕ್ಕಿಳಿದ ಘಟನೆ ಮುಲ್ಕಿ ಸಮೀಪದ ಕೊಲ್ನಾಡುವಿನಲ್ಲಿ ಸಂಭವಿಸಿದೆ.
ಮಂಗಳೂರಿನಿಂದ ಕೊಲ್ಲೂರು ಕಡೆಗೆ ತೆರಳುತ್ತಿದ್ದ ಬಸ್ ಕೊಲ್ನಾಡು ತಲುಪುತ್ತಿದ್ದಂತೆ ಚಾಲಕನಿಗೆ ಹೃದಯಾಘಾತ ಉಂಟಾಗಿದೆ ಎಂದು ತಿಳಿದುಬಂದಿದೆ. ನಿಯಂತ್ರಣ ತಪ್ಪಿದ ಬಸ್ ರಸ್ತೆಯಿಂದ ಪಕ್ಕದ ಕಂದಕಕ್ಕೆ ಇಳಿದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಸ್ ಚಾಲಕನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.