ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ 22 ವಿದ್ಯಾರ್ಥಿಗಳು ಉತ್ತೀರ್ಣ

Update: 2016-04-30 17:13 GMT

    ಮೂಡುಬಿದಿರೆ, ಎ.30: ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ಜೆಇಇ (ಮೈನ್ಸ್)ಪ್ರವೇಶ ಪರೀಕ್ಷೆಯಲ್ಲಿ ಮೂಡುಬಿದಿರೆ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ 22 ವಿದ್ಯಾರ್ಥಿಗಳು ಅತ್ಯುತ್ತಮ ಅಂಕದೊಂದಿಗೆ ಉತ್ತೀರ್ಣರಾಗಿದು,  ಮುಂದಿನ ಹಂತವಾದ ಜೆಇಇ (ಅಡ್ವಾನ್ಸ್) ಪರೀಕ್ಷೆಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.


ಸಂಸ್ಥೆಯಿಂದ ಒಟ್ಟು 25 ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದು, ಶೇ. 88 ಫಲಿತಾಂಶವನ್ನು ತಂದು, ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಕಾಲೇಜಿನ ಪ್ರಥಮ ವರ್ಷದಲ್ಲಿ (2013-14) 6 ವಿದ್ಯಾರ್ಥಿಗಳು, ಎರಡನೆ ವರ್ಷ (2014-15) 11 ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದಾರೆ.

ಈ ಬಾರಿ ಇನ್ನೂ ಉತ್ತಮವಾದ ಫಲಿತಾಂಶ ಬಂದಿದ್ದು, ವಿದ್ಯಾರ್ಥಿಗಳನ್ನು ಅಭಿನಂದಿಸುವುದಾಗಿ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News