×
Ad

ಐಎಎಸ್ ಅಧಿಕಾರಿಗಳಿಗೆ ಭಡ್ತಿ

Update: 2016-04-30 23:54 IST

ಬೆಂಗಳೂರು, ಎ. 30: ಯೋಜನೆ ಮತ್ತು ಕಾರ್ಯಕ್ರಮ ನಿರ್ವಹಣೆ ಹಾಗೂ ಸಾಂಖ್ಯಿಕ ಇಲಾಖೆಯ ಕಾರ್ಯದರ್ಶಿ ಉಮಾ ಮಹದೇವನ್, ಬಿಡಿಎ ಆಯುಕ್ತ ಪಿ.ಶ್ಯಾಮ್‌ಭಟ್, ಮುಖ್ಯಮಂತ್ರಿಯ ಪ್ರಧಾನ ಕಾರ್ಯದರ್ಶಿ-2 ತುಷಾರ್ ಗಿರಿನಾಥ್, ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಅವರಿಗೆ ಶೇ.3ರಷ್ಟು ವಾರ್ಷಿಕ ವೇತನ ಹೆಚ್ಚಳದೊಂದಿಗೆ ಭಡ್ತಿ ನೀಡಲಾಗಿದೆ.

ವರ್ಗಾವಣೆ: ಕಾರ್ಮಿಕ ಇಲಾಖೆ ಆಯುಕ್ತರನ್ನಾಗಿ ಆರ್.ಆರ್.ಜನ್ನು, ಮುಖ್ಯಮಂತ್ರಿಯ ಹೆಚ್ಚುವರಿ ಕಾರ್ಯದರ್ಶಿಯಾಗಿ ಜಿ.ಎಸ್.ಶೇಖರಪ್ಪ ಹಾಗೂ ಹಟ್ಟಿ ಚಿನ್ನದ ಗಣಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಎಸ್.ಝಿಯಾವುಲ್ಲಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಶನಿವಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News