ಕಾಸರಗೋಡು: ಪೊಲೀಸರು ವಶಪಡಿಸಿಕೊಂಡಿದ್ದ ವಾಹನಗಳಿಗೆ ಬೆಂಕಿ
Update: 2016-05-01 17:15 IST
ಕಾಸರಗೋಡು, ಮೇ.1: ಹಲವು ಪ್ರಕರಣಗಳಿಗೆ ಸಂಬಂಧಪಟ್ಟಂತೆ ಬೇಕಲ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದ ವಾಹನಗಳು ಅಗ್ನಿಗಾಹುತಿಯಾದ ಘಟನೆ ರವಿವಾರ ಮಧ್ಯಾಹ್ನ ಸಂಭವಿಸಿದೆ.
ವಿವಿಧ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಪೊಲೀಸರು ವಶಪಡಿಸಿಕೊಂಡಿದ್ದ ವಾಹನಗಳನ್ನು ಚಟ್ಟಂಚಾಲ್ನಲ್ಲಿ ಇರಿಸಲಾಗಿತ್ತು. ಈ ವಾಹನಗಳಿಗೆ ಬೆಂಕಿ ಹತ್ತಿಕೊಂಡಿದ್ದು, ಸುಮಾರು ಹತ್ತಕ್ಕೂ ಅಧಿಕ ವಾಹನಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕೂಡಲೇ ಬೆಂಕಿಯನ್ನು ನಂದಿಸಿ, ಪರಿಸ್ಥಿತಿಯನ್ನು ನಿಯಂತ್ರಿಸಿದರು. ಕೆಲವು ತಿಂಗಳುಗಳ ಹಿಂದೆಯೂ ಇದೇ ರೀತಿ ಅಗ್ನಿ ಆಕಸ್ಮಿಕ ಸಂಭವಿಸಿ, 25ಕ್ಕೂ ಅಧಿಕ ವಾಹನಗಳು ಬೆಂಕಿಗಾಹುತಿಯಾಗಿದ್ದವು ಎಂದು ತಿಳಿದುಬಂದಿದೆ.