×
Ad

ಕೇಂದ್ರ ಸರಕಾರದಿಂದ ಕಾರ್ಮಿಕ ವರ್ಗದ ಶೋಷಣೆ: ಜೆ.ಬಾಲಕೃಷ್ಣ ಶೆಟ್ಟಿ

Update: 2016-05-01 18:48 IST

ಮಂಗಳೂರು, ಮೇ 1: ಸಿಐಟಿಯು ದ.ಕ. ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಇಂದು ನಗರದ ಎನ್‌ಜಿಒ ಸಭಾಂಗಣದಲ್ಲಿ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು.
 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಐಟಿಯು ಜಿಲ್ಲಾಧ್ಯಕ್ಷ ಜೆ. ಬಾಲಕೃಷ್ಣ ಶೆಟ್ಟಿ, ದೇಶದಲ್ಲಿ ಅಧಿಕಾರಕ್ಕೆ ಬಂದಿರುವ ನರೇಂದ್ರ ಮೋದಿ ಸರಕಾರ ಕಾರ್ಮಿಕ ವರ್ಗವನ್ನು ಶೋಷಣೆ ಮಾಡುತ್ತಿದ್ದು ಕಾರ್ಮಿಕ ನೀತಿಯನ್ನು ಸಡಿಲಗೊಳಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿದರು.


 ಕಾರ್ಮಿಕರ ಹಕ್ಕುಗಳನ್ನು ಕಸಿಯುತ್ತಿರುವ ಸರಕಾರದ ವಿರುದ್ಧ ಸೆ.2ರಂದು ನಡೆಯುವ ಮುಷ್ಕರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಭಾಗವಹಿಸಿ ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಬೇಕಾಗಿದೆ ಎಂದು ಹೇಳಿದರು.

ಸಿಐಟಿಯು ನಗರ ಸಮಿತಿ ಅಧ್ಯಕ್ಷೆ ಜಯಂತಿ ಬಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಕಾರ್ಮಿಕ ಮುಖಂಡರುಗಳಾದ ಸುನಿಲ್‌ಕುಮಾರ್ ಬಜಾಲ್, ಭಾರತಿ ಬೋಳಾರ್, ಯೋಗೀಶ್ ಜೆಪ್ಪಿನಮೊಗರು, ಸಂತೋಷ್ ಶಕ್ತಿನಗರ, ಲಿಂಗಪ್ಪ ನಂತೂರು, ಪ್ರೇಮನಾಥ ಜಲ್ಲಿಗುಡ್ಡೆ, ಎಚ್.ಎಂ.ಬಾವ, ವಿಲ್ಲಿ ವಿಲ್ಸನ್, ಸಂತೋಷ್ ಕುಮಾರ್ ಎಸ್.ಆರ್. ಉಪಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News