'ಸಿದ್ದರಾಮಯ್ಯ ನೇತೃತ್ವದಲ್ಲೇ ಮುಂದಿನ ಚುನಾವಣೆ'
Update: 2016-05-01 19:20 IST
ಬೆಂಗಳೂರು, ಮೇ 1: ಮುಂಬರುವ ವಿಧಾನಸಭಾ ಚುನಾವಣೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಎದುರಿಸಲಿದ್ದು, ಆಡಳಿತಾರೂಢ ಕಾಂಗ್ರೆಸ್ ಪಕ್ಷವೇ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಕಾರ್ಮಿಕ ಸಚಿವ ಪಿ.ಟಿ.ಪರಮೇಶ್ವರ್ ನಾಯ್ಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕಾರ್ಮಿಕ ದಿನಾಚರಣೆಯ ಹಿನ್ನೆಲೆಯಲ್ಲಿ ರವಿವಾರ ಭಾರತ ರಾಷ್ಟ್ರೀಯ ಮಜ್ದೂರ್ ಕಾಂಗ್ರೆಸ್ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇನ್ನೂ ಎರಡು ವರ್ಷ ಸಿದ್ಧರಾಮಯ್ಯ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲಿದ್ದು, ಅವರಿಗೆ ಪಕ್ಷದ ಹೈಕಮಾಂಡ್‌ನ ಕೃಪಾಶೀರ್ವಾದವಿದೆ ಎಂದು ಹೇಳಿದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಲಾಗುತ್ತದೆ ಎಂಬುದು ಕೇವಲ ಕಪೋಲಕಲ್ಪಿತ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಅವರು, ಸಿಎಂ ಬದಲಾವಣೆ ಸಂಬಂಧ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ದೂರಿದರು.