ಉಡುಪಿ ಜಿಲ್ಲೆಯ 11 ಕೇಂದ್ರಗಳಲ್ಲಿ ನಾಳೆಯಿಂದ ಸಿಇಟಿ ಪರೀಕ್ಷೆ

Update: 2016-05-02 14:34 GMT

ಉಡುಪಿ, ಮೇ 2: ರಾಜ್ಯದಲ್ಲಿ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಬಯಸುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ 2016ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮೇ 4 ಹಾಗೂ 5ರಂದು ರಾಜ್ಯಾದ್ಯಂತ ನಡೆಯಲಿದ್ದು, ಉಡುಪಿ ಜಿಲ್ಲೆಯಲ್ಲಿ ಒಟ್ಟು 11ಪರೀಕ್ಷಾ ಕೇಂದ್ರಗಳಲ್ಲಿ 4,240 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 

ಇವುಗಳಲ್ಲಿ 6 ಕೇಂದ್ರಗಳು ಉಡುಪಿಯಲ್ಲಿದ್ದು, 3 ಕುಂದಾಪುರ ಹಾಗೂ 2 ಕಾರ್ಕಳದಲ್ಲಿವೆ. ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆ ನಡೆಯುವ 11 ಕೇಂದ್ರಗಳು ಹಾಗೂ ಅಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಸಂಖ್ಯೆ ಕೆಳಕಂಡಂತಿದೆ.

 1.ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು ಉಡುಪಿ (ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು 368)

2.ವಿದ್ಯೋದಯ ಪದವಿ ಪೂರ್ವ ಕಾಲೇಜು ಉಡುಪಿ (368),

3. ಎಂಜಿಎಂ ಪದವಿ ಪೂರ್ವ ಕಾಲೇಜು ಉಡುಪಿ (400) ,

4. ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ (368),

5.ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ (304),

6.ಮಣಿಪಾಲ ಪದವಿ ಪೂರ್ವ ಕಾಲೇಜು (400).

7.ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜು ಕುಂದಾಪುರ (400)

8. ಭಂಡಾರ್‌ಕಾರ್ಸ್ ಪದವಿ ಪೂರ್ವ ಕಾಲೇಜು ಕುಂದಾಪುರ (368)

9. ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ (432)

10. ಭುವನೇಂದ್ರ ಪದವಿ ಪೂರ್ವ ಕಾಲೇಜು ಕಾರ್ಕಳ (432),

11. ಸರಕಾರಿ ಪದವಿ ಪೂರ್ವ ಕಾಲೇಜು ಕಾರ್ಕಳ (400).

ನಿಷೇಧಾಜ್ಞೆ: ಉಡುಪಿ ಜಿಲ್ಲೆಯಲ್ಲಿ ನಿಗದಿ ಪಡಿಸಿದ 11 ಪರೀಕ್ಷಾ ಕೇಂದ್ರ ಗಳಲ್ಲಿ ಮೇ 4 ಮತ್ತು 5ರಂದು ನಡೆಯಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯಾವುದೇ ಅವ್ಯವಹಾರಗಳಿಲ್ಲದೇ ಶಾಂತಿಯುತವಾಗಿ ನಡೆಯಲು ಅನುಕೂಲವಾಗುವಂತೆ ಎಲ್ಲಾ 11 ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ. ವ್ಯಾಪ್ತಿಯಲ್ಲಿ ಸೆಕ್ಷನ್ 144(1)ರಂತೆ ನಿಷೇಧಾಜ್ಞೆಯನ್ನು ವಿಧಿಸಲಾಗಿದೆೆ ಉಡುಪಿ ಜಿಲ್ಲಾಧಿಕಾರಿ ಡಾ.ವಿಶಾಲ್ ಆರ್ ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ವೇಳಾಪಟ್ಟಿ:

ಮೇ 4 ಬುಧವಾರ :

ಬೆಳಗ್ಗೆ 10:30ರಿಂದ 11:50ರವರೆಗೆ ಜೀವಶಾಸ್ತ್ರ

ಅಪರಾಹ್ಣ 2:30ರಿಂದ 3:50ರವರೆಗೆ ಗಣಿತ ಶಾಸ್ತ್ರ.


ಮೇ 5ಗುರುವಾರ

ಬೆಳಗ್ಗೆ 10:30ರಿಂದ 11:50ರವರೆಗೆ ಭೌತಶಾಸ್ತ್ರ.

ಅಪರಾಹ್ಣ 2:30ರಿಂದ 3:50ರವರೆಗೆ ರಸಾಯನ ಶಾಸ್ತ್ರ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News