×
Ad

ಕಬಡ್ಡಿ ಪಂದ್ಯ ವೀಕ್ಷಣೆ ವೇಳೆ ಕುಸಿದುಬಿದ್ದ ಲಿಂಬಾವಳಿ

Update: 2016-05-02 23:40 IST

ಬೆಂಗಳೂರು, ಮೇ 2: ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಕುಸಿದು ಬಿದ್ದ ಘಟನೆ ಸೋಮವಾರ ನಡೆದಿದೆ.
ಬೆಂಗಳೂರಿನ ಹೂಡಿಯಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ಶಾಸಕ ಲಿಂಬಾವಳಿ ವೇದಿಕೆಯಲ್ಲಿ ಕುಳಿತು ವೀಕ್ಷಿಸುತ್ತಿದ್ದರು. ಈ ವೇಳೆ ಏಕಾಏಕಿ ಅರವಿಂದ ಲಿಂಬಾವಳಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸಮೀಪದ ಕೆ.ಆರ್.ಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.ಯಾವುದೇ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News