ಯಕ್ಷಧ್ರುವ ಪಟ್ಲ ಸಂಭ್ರಮ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆ
Update: 2016-05-03 20:01 IST
ಮಂಗಳೂರು, ಮೇ 3: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಮೇ.22 ರಂದು ನಡೆಯಲಿರುವ ಯಕ್ಷಧ್ರುವ ಪಟ್ಲ ಸಂಭ್ರಮ -2016 ಕಾರ್ಯಕ್ರಮದ ಆಹ್ವಾನ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಇಂದು ಪತ್ತುಮುಡಿ ಜನತಾ ಡಿಲಕ್ಸ್ ಹೋಟೆಲ್‌ನಲ್ಲಿಂದು ನಡೆಯಿತು.
ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಶಾರದಾ ವಿದ್ಯಾಲಯದ ಸಂಚಾಲಕ ಎಂ.ಬಿ.ಪುರಾಣಿಕ್, ಯಕ್ಷರಂಗದಲ್ಲಿ ಪಟ್ಲ ಸತೀಶ್ ಶೆಟ್ಟಿ, ಕಡಿಮೆ ಅವಧಿಯಲ್ಲಿ ದೊಡ್ಡ ಸಾಧನೆ ಮಾಡಿ ಜನಸಾಮಾನ್ಯರ ಮನಸ್ಸನ್ನು ಗೆದ್ದ ವ್ಯಕ್ತಿ. ಪಟ್ಲ ಫೌಂಡೇಶನ್ ಮೂಲಕ ಸಮಾಜಸೇವೆಗೈಯುವ ಅವರ ಕಾರ್ಯ ಶ್ಲಾಘನೀಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಟ್ಲ ಸತೀಶ್ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ಸಿಎ ಸುದೇಶ್ ರೈ, ಬಲಿಪ ನಾರಯಣ ಭಾಗವತ, ಲಕ್ಷ್ಮೀ ಮಚ್ಚಿನ , ಸವಣೂರು ಸೀತಾರಾಮ ರೈ, ಡಾ.ಪದ್ಮನಾಭ ಕಾಮತ್, ಲಕ್ಷ್ಮೀಶ್ ಭಂಡಾರಿ ಉಪಸ್ಥಿತರಿದ್ದರು.