ಸಂತ್ರಸ್ತೆಯಿಂದ ರಾಘವೇಶ್ವರಶ್ರೀಗಳ ವಿರುದ್ಧ ಕ್ರಿಮಿನಲ್ ಅರ್ಜಿ ಸಲ್ಲಿಕೆ

Update: 2016-05-03 17:45 GMT

ಅರ್ಜಿ ತಿರಸ್ಕರಿಸಿದ ಹೈಕೋರ್ಟ್
ಬೆಂಗಳೂರು, ಮೇ 3: ರಾಮಚಂದ್ರಾಪುರ ಮಠದ ರಾಘವೇಶ್ವರಶ್ರೀಗಳ ವಿರುದ್ಧದ ಅತ್ಯಾಚಾರ ಪ್ರಕರಣವನ್ನು ಸೆಷನ್ಸ್ ನ್ಯಾಯಾಲಯ ರದ್ದುಪಡಿಸಿದ ಹಿನ್ನೆಲೆಯಲ್ಲಿ ಪ್ರಕರಣದ ಸಂತ್ರಸ್ತೆ ಪ್ರೇಮಲತಾಶಾಸ್ತ್ರಿ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ.
              
  ಈ ಸಂಬಂಧ ಪ್ರೇಮಲತಾಶಾಸ್ತ್ರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆನಂದ ಭೈರಾರೆಡ್ಡಿ ಅವರಿದ್ದ ರಜಾಕಾಲದ ನ್ಯಾಯಪೀಠ. ರಾಘವೇಶ್ವರಶ್ರೀಗಳ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ಸೆಷನ್ಸ್ ನ್ಯಾಯಾಲಯ ರದ್ದುಪಡಿಸಿದೆ. ಅಲ್ಲದೆ, ಈ ಆದೇಶವನ್ನು ಪ್ರಶ್ನಿಸಿ ಈಗಾಗಲೇ ಸಿಐಡಿ ಅಧಿಕಾರಿಗಳು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ, ಸಂತ್ರಸ್ತೆ ಪ್ರೇಮಲತಾಶಾಸ್ತ್ರಿ ಅವರ ಅರ್ಜಿಯನ್ನು ಪರಿಗಣಿಸಲು ಬರುವುದಿಲ್ಲ. ಆದರೆ, ಸಿಬಿಐಗೆ ತಮ್ಮ ಮೇಲೆ ನಡೆದಿರುವ ದೌರ್ಜನ್ಯಗಳ ಬಗ್ಗೆ ಮಾಹಿತಿ ನೀಡಬಹುದೆಂದು ನ್ಯಾಯಪೀಠ ತಿಳಿಸಿ, ಅರ್ಜಿಯನ್ನು ವಜಾಗೊಳಿಸಿತು. ರಾಮಕಥಾ ಗಾಯಕಿ ಪ್ರೇಮಲತಾಶಾಸ್ತ್ರಿ ತಮ್ಮ ಮೇಲೆ ರಾಘವೇಶ್ವರಶ್ರೀಗಳು ಅತ್ಯಾಚಾರ ಎಸಗಿದ್ದಾರೆಂದು ಆಪಾದಿಸಿ ಸೆಷನ್ಸ್ ಕೋರ್ಟ್ ಮೆಟ್ಟಿಲೇರಿದ್ದರು. ಸೆಷನ್ಸ್ ಕೋರ್ಟ್ ಪ್ರೇಮಲತಾಶಾಸ್ತ್ರಿ ಹಾಗೂ ಶ್ರೀಗಳ ನಡುವಿನ ಸಂಬಂಧ ಅವರು ಆರೋಪಿಸಿದಂತಿಲ್ಲವೆಂದು ಅಭಿಪ್ರಾಯಿಸಿ ಶ್ರೀಗಳ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಿಐಡಿ ಹೈಕೋರ್ಟ್ ಮೆಟ್ಟಿಲೇರಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News