ಸಾಲ ಸೌಲಭ್ಯಕ್ಕೆ ಹಿಂದುಳಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Update: 2016-05-03 18:28 GMT

ಬೆಂಗಳೂರು, ಮೇ 3: ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ 2016-17ನೆ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳಲ್ಲಿ ಸಾಲ-ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಚೈತನ್ಯ ಸಬ್ಸಿಡಿ ಕಂ ಸಾಫ್ಟ್‌ಲೋನ್ ಯೋಜನೆ, ಅರಿವು-ಶೈಕ್ಷಣಿಕ ನೇರ ಸಾಲ ಯೋಜನೆ, ವಿದೇಶಿ ವಿವಿಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿರುವ ಹಿಂ.ವರ್ಗಗಳ ವಿದ್ಯಾರ್ಥಿಗಳಿಗೆ ಬಡ್ಡಿರಹಿತ ಸಾಲ ಯೋಜನೆ, ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಕಿರುಸಾಲ ಯೋಜನೆ.

ಸಾಂಪ್ರದಾಯಿಕ ಕುಶಲಕರ್ಮಿಗಳು ಮತ್ತು ವೃತ್ತಿ ಕಸುಬುದಾರರಿಗೆ ಸಾಲ ಸೌಲಭ್ಯದ ಯೋಜನೆ, ಗಂಗಾ-ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು, ವೈಯಕ್ತಿಕ ಕೊಳವೆಬಾವಿ ಯೋಜನೆ, ಸಾಮೂಹಿಕ ನೀರಾವರಿ ಯೋಜನೆ, ಸಾಂಪ್ರದಾಯಿಕ ವೃತ್ತಿಗಳಿಗೆ ಆರ್ಥಿಕ ನೆರವು, ಗಂಗಾ ಕಲ್ಯಾಣ ನೀರಾವರಿ ಸೌಲಭ್ಯ, ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ ಆರ್ಥಿಕ ನೆರವು.

 ಸ್ವಯಂ ಉದ್ಯೋಗ ಸಾಲ ಯೋಜನೆ, ರಾಷ್ಟ್ರೀಯ ಹಿಂ.ವರ್ಗಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಸಾಲ ಯೋಜನೆಗಳು, ಗಂಗಾ ಕಲ್ಯಾಣ ನೀರಾವರಿ ಸೌಲಭ್ಯ, ಅವಧಿಸಾಲ ಯೋಜನೆಗಳು, ಹಿಂ.ವರ್ಗಗಳ ವಿದ್ಯಾರ್ಥಿಗಳಿಗೆ ಕಡಿಮೆ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ, ಮಹಿಳಾ ಸಮೃದ್ಧಿ ಹಾಗೂ (ಎಸ್‌ಎಚ್‌ಜಿಗಳ ಮೂಲಕ, ಮಹಿಳೆಯರಿಗಾಗಿ) ಮೈಕ್ರೋ ಫೈನಾನ್ಸ್ ಸಾಲ ಯೋಜನೆ.

ಈ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಇಚ್ಛಿಸುವವರು ಹಿಂ.ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3‘ಬಿ’ಗೆ ಸೇರಿದವರಾಗಿರಬೇಕು. ರಾಜ್ಯ ಸರಕಾರದ ಯೋಜನೆಗಳಿಗೆ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 40 ಸಾವಿರ ರೂ.ಗಳು, ಪಟ್ಟಣ ಪ್ರದೇಶದವರಿಗೆ 55 ಸಾವಿರ ರೂ.ಗಳ ಒಳಗಿರಬೇಕು.

ರಾಷ್ಟ್ರೀಯ ಹಿಂ.ವರ್ಗಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿದಾರರ ಮತ್ತು ಅವರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98 ಸಾವಿರ ರೂ.ಗಳು, ಪಟ್ಟಣ ಪ್ರದೇಶದವರಿಗೆ 1.20ಲಕ್ಷ ರೂ.ಗಳು. ವಯೋಮಿತಿ 18ರಿಂದ 55ವರ್ಷಗಳ ಮಿತಿಯಲ್ಲಿರಬೇಕು. ನಿಗದಿತ ಅರ್ಜಿ ನಮೂನೆಗಳನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂ.ಗ್ರಾ. ಜಿಲ್ಲೆ, ನಂ: 123/1037, 1ನೆ ಮಹಡಿ, 20ನೆ ಮುಖ್ಯರಸ್ತೆ, 5ನೆ ಬ್ಲಾಕ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ರಾಜಾಜಿನಗರ, ಬೆಂಗಳೂರು ಅಥವಾ ಆಯಾ ತಾಲೂಕಿನ ಹಿಂ. ವರ್ಗಗಳ ಕಲ್ಯಾಣ ವಿಸ್ತಾರಣಾಧಿಕಾರಿಗಳ ಕಚೇರಿಯಲ್ಲಿ ಮೇ 25ರೊಳಗೆ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜೂ.16ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ www.karnataka.gov. in/dbcdc ಹಾಗೂ ದೂ.ಸಂಖ್ಯೆ 080-2315 6007 ನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಎ.ಎಸ್. ಕೆಂಪಣ್ಣ ಪ್ರಕಟನೆಯಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News