ಇಂದಿನಿಂದ ಸಿಇಟಿ ಪ್ರವೇಶ ಪರೀಕ್ಷೆ

Update: 2016-05-03 18:29 GMT

ಇಂದಿನಿಂದ ಸಿಇಟಿ ಪ್ರವೇಶ ಪರೀಕ್ಷೆ ಬೆಂಗಳೂರು, ಮೇ 3: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕಾಗಿ 2016-17ನೆ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಮೇ 4ರ ಬೆಳಗ್ಗೆ 10:30ರಿಂದ 11:50ರ ವರೆಗೆ ಜೀವಶಾಸ್ತ್ರ ಪರೀಕ್ಷೆ ಮತ್ತು ಮಧ್ಯಾಹ್ನ 2:30ರಿಂದ 3:50ರವರೆಗೆ ಗಣಿತ ಪರೀಕ್ಷೆ ನಡೆಯಲಿದೆ.

ಮೇ 5ರ ಗುರುವಾರ ಬೆಳಗ್ಗೆ 10:30ರಿಂದ 11:50ರ ವರೆಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ 2:30ರಿಂದ 3:50ರವರೆಗೆ ರಸಾಯನ ಶಾಸ್ತ್ರ ಪರೀಕ್ಷೆ ನಡೆಯಲಿದ್ದು, ಪ್ರತಿಯೊಂದು ವಿಷಯವೂ ಬಹು ಆಯ್ಕೆ ಮಾದರಿಯ 60 ಅಂಕಗಳ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ ಎಂದು ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ವಿದ್ಯಾರ್ಥಿಗಳು ಪರೀಕ್ಷೆ ಆರಂಭಕ್ಕೆ ಅರ್ಧ ಗಂಟೆ ಮೊದಲೇ ಪರೀಕ್ಷಾ ಸ್ಥಳದಲ್ಲಿರಬೇಕು ಮತ್ತು ಪ್ರವೇಶ ಪತ್ರದ ಹಿಂಬದಿಯಲ್ಲಿ ನೀಡಿರುವ ಸೂಚನೆಗಳನ್ನು ಎಚ್ಚರಿಕೆಯಿಂದ ಓದಿಕೊಳ್ಳಬೇಕು. ನೀಲಿ ಅಥವಾ ಕಪ್ಪು ಬಾಲ್ ಪಾಯಿಂಟ್ ಪೆನ್ನನ್ನು ಮಾತ್ರ ಪರೀಕ್ಷೆಯಲ್ಲಿ ಬಳಕೆ ಮಾಡಬೇಕು.
ವಿದ್ಯಾರ್ಥಿಗಳು ಯಾವುದೇ ಗೊಂದಲ ಆತಂಕವಿಲ್ಲದೆ ಶಾಂತರೀತಿಯಲ್ಲಿ ಸಿಇಟಿ ಪರೀಕ್ಷೆ ಬರೆಯುವಂತೆ ಸಿಇಟಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಣೆಯಲ್ಲಿ ಶುಭ ಹಾರೈಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News