ಭಟ್ಕಳ: ಮೇ.5ರಂದು ಕನ್ನಡ ಸಾಹಿತ್ಯ ಪರಿಷತ್ ಸಂಸ್ಥಾಪನಾ ದಿನಾಚರಣೆ

Update: 2016-05-03 18:45 GMT

  ಭಟ್ಕಳ, ಮೇ 3: ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆಯಾಗಿ 101 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ವತಿಯಿಂದ ಸಂಸ್ಥಾಪನಾ ದಿನಾಚರಣೆಯನ್ನು ಮೇ.5ರಂದು ಪೂರ್ವಾಹ್ನ 11 ಗಂಟೆಗೆ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ.ಸ.ಪ. ತಾಲೂಕು ಅಧ್ಯಕ್ಷ ಗಂಗಾಧರ್ ನಾಯ್ಕ ತಿಳಿಸಿದ್ದಾರೆ.

   ಹಿರಿಯ ಸಾಹಿತಿ ಡಾ.ಸೈಯದ್ ಝಮೀರುಲ್ಲಾ ಶರೀಫ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹಿರಿಯ ಸಾಹಿತಿ ಡಾ.ಆರ್.ವಿ.ಸರಾಫ್ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾನಿಲಯದ ಪ್ರಾಚಾರ್ಯ ಡಾ.ಆರ್.ನರಸಿಂಹಮೂರ್ತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶಿಕ್ಷಕ ಶ್ರೀಧರ ಶೇಟ್ ಉಪನ್ಯಾಸ ನೀಡಲಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್‌ನ ತಾಲೂಕು ಅಧ್ಯಕ್ಷ ಗಂಗಾಧರ್ ನಾಯ್ಕ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News