ಮೇ 7ರಂದು ಗಾಂಧಿನಗರ ಸರ್ಕಾರಿ ಪಿಯು ಕಾಲೇಜು ನೂತನ ಕಟ್ಟಡ ಉದ್ಘಾಟನೆ
ಸುಳ್ಯ, ಮೇ 4: ಗಾಂಧಿನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ಹಾಗೂ ಹೊಸ ಕೊಠಡಿಗಳಿಗೆ ಶಂಕುಸ್ಥಾಪನಾ ಸಮಾರಂಭ ಮೇ 7ರಂದು ಅಪರಾಹ್ನ 2 ಗಂಟೆಗೆ ನಡೆಯಲಿದೆ.
ಕಾಲೇಜಿನ ಅಭಿವೃದ್ಧಿ ಸಮಿತಿ ಖಜಾಂಜಿ ಎಂ.ವೆಂಕಪ್ಪ ಗೌಡ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದರು. 51 ಲಕ್ಷ ರೂಪಾಯಿ ವೆಚ್ದಲ್ಲಿ 7 ಕೊಠಡಿಗಳನ್ನು ನಿರ್ಮಿಸಲಾಗಿದ್ದು, ಅದರ ಉದ್ಘಾಟನೆಯನ್ನು ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ರತ್ನಾಕರ ಕಿಮ್ಮನೆ ಉದ್ಘಾಟಿಸಲಿದ್ದಾರೆ. ಹೊಸದಾಗಿ ನಾಲ್ಕು ತರಗತಿ ಕೊಠಡಿಗಳ ನಿರ್ಮಾಣಕ್ಕೆ ಈ ಸಾಲಿನಲ್ಲಿ 50 ಲಕ್ಷ ಬಿಡುಗಡೆಗೊಂಡಿದ್ದು, ಅದಕ್ಕೂ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಪಂ., ತಾಲೂಕು ಪಂ., ಪಟ್ಟಣ ಪಂ. ಅಧ್ಯಕ್ಷರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದವರು ಹೇಳಿದರು.
ಸಮಿತಿ ಪದಾಧಿಕಾರಿಗಳಾದ ಜೆ.ಕೆ.ರೈ, ಕೆ.ಬಿ.ಇಬ್ರಾಹಿಂ, ಶಹೀದ್ ಪಾರೆ, ಶಾಫಿ ಕುತ್ತಮೊಟ್ಟೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.