×
Ad

ಮಂಗಳೂರಿನ ಅಳಿಯ, ಜನಪರ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ

Update: 2016-05-04 18:23 IST

ಬೆಂಗಳೂರು, ಮೇ 4: ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ. ಅತೀಕ್ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಅವರು ಈವರೆಗೆ ರಾಜ್ಯದ ಸಿಬ್ಬಂದಿ ಹಾಗೂ ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಆ ಹುದ್ದೆಗೆ ಟಿ.ಕೆ. ಅನಿಲ್ ಕುಮಾರ್ ಬರಲಿದ್ದಾರೆ. ಬುಧವಾರ ಈ ಸಂಬಂಧ ಆದೇಶ ಹೊರಡಿಸಲಾಗಿದೆ.

ರಾಜ್ಯದ ಅತ್ಯಂತ ದಕ್ಷ, ಪ್ರಾಮಾಣಿಕ, ಜನಪರ ಕಾಳಜಿಯ ಐಎಎಸ್ ಅಧಿಕಾರಿಗಳಲ್ಲಿ ಒಬ್ಬರು ಎಂದು ಜನಮನ್ನಣೆ ಪಡೆದಿರುವ ಅತೀಕ್ ಅವರು ಪ್ರಧಾನ ಮಂತ್ರಿ ಕಾರ್ಯಾಲಯದಲ್ಲಿ ನಿರ್ದೇಶಕರಾಗಿ ಹಾಗೂ ಬಳಿಕ ಜಂಟಿ ಕಾರ್ಯದರ್ಶಿಯಾಗಿ 5 ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದರು. ಆ ಬಳಿಕ ವಿಶ್ವ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕರ ಹಿರಿಯ ಸಲಹೆಗಾರರಾಗಿ ಮೂರು ವರ್ಷ ಅಮೆರಿಕದಲ್ಲಿ ಸೇವೆ ಸಲ್ಲಿಸಿದ ಅವರು ಇತ್ತೀಚಿಗೆ ರಾಜ್ಯ ಸೇವೆಗೆ ಮರಳಿದ್ದರು.

ತುಮಕೂರು ಜಿಲ್ಲೆಯ ಪಾವಗಡದ ಕೃಷಿ ಕುಟುಂಬದಲ್ಲಿ ಹುಟ್ಟಿದ ಅತೀಕ್ ಕೃಷಿಯಲ್ಲಿ ಸ್ನಾತಕೋತ್ತರ ಪದವಿ ಪಡೆದ ಬಳಿಕ ಐಎಎಸ್ ಪರೀಕ್ಷೆ ಬರೆದು ಆಯ್ಕೆಯಾಗಿದ್ದರು.

ಮಂಗಳೂರಿನಲ್ಲಿ ಅಸಿಸ್ಟೆಂಟ್ ಕಮಿಷನರ್ ಆಗಿ ಸೇವೆ ಆರಂಭಿಸಿದ ಅವರು ಮಂಡ್ಯ, ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ, ರಾಜ್ಯ ಸರ್ವ ಶಿಕ್ಷಣ ಅಭಿಯಾನದ ಯೋಜನಾ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

ಅವರು ಮಂಗಳೂರಿನ ಖ್ಯಾತ ಲೆಕ್ಕ ಪರಿಶೋಧಕ ಶೇಕ್ ಅಬ್ದುಲ್ಲಾರ ಅಳಿಯ. 

ಎಲ್.ಕೆ. ಅತೀಕ್ ಅವರು ಉತ್ತಮ ಲೇಖಕರೂ ಆಗಿದ್ದು, ಖ್ಯಾತ ಸಾಹಿತಿ ಫೈಜ್ಹ್ ಅಹ್ಮದ್‌ರ ಕವನಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News