ಪೈಪ್‌ನಿಂದ ನೇಣುಬಿಗಿದು ಆತ್ಮಹತ್ಯೆ
Update: 2016-05-04 20:00 IST
ಬೆಳ್ತಂಗಡಿ, ಮೇ 4: ವ್ಯಕ್ತಿಯೋರ್ವರು ಪೈಪ್‌ನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ನೆರಿಯ ಪೆರಿಯಡ್ಕದ ಪಲೆದಾಡಿ ಎಂಬಲ್ಲಿ ಸಂಭವಿಸಿದೆ. ಇಲ್ಲಿನ ನಿವಾಸಿ ಸದಾಶಿವ (35) ಎಂಬವರು ತನ್ನ ಮನೆಯ ಪಕ್ಕದಲ್ಲಿದ್ದ ಗೇರುಬೀಜದ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ವಿವಾಹಿತರಾಗಿದ್ದು, ಇಬ್ಬರು ಮಕ್ಕಳನ್ನು ಹೊಂದಿದ್ದಾರೆ.ಕೂಲಿ ಕೆಲಸ ಮಾಡಿಕೊಂಡು ಜೀವನ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.