ಗಣಪತಿ ಅರ್ಬನ್ ಕೋ.ಆಪರೇಟಿವ್ ಬ್ಯಾಂಕ್‌ಗೆ ಶತಮಾನೋತ್ಸವ ಸಂಭ್ರಮ
ಸಾಗರ, ಮೇ 4: ಸ್ವಾತಂತ್ರ್ಯ ಪೂರ್ವದಲ್ಲಿ ಪ್ರಾರಂಭಗೊಂಡು ಇದೀಗ ನೂರುವರ್ಷ ಪೂರೈಸಿರುವ ಗಣಪತಿ ಅರ್ಬನ್ ಕೋ. ಆಪರೇಟಿವ್ ಬ್ಯಾಂಕ್‌ನ ಶತಮಾನೋತ್ಸವ ಕಾರ್ಯಕ್ರಮ ಮೇ 8ರಂದು ಗಾಂಧಿಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬ್ಯಾಂಕ್‌ನ ಅಧ್ಯಕ್ಷ ಯು.ಎಲ್.ಸುಭಾಷ್ಚಂದ್ರ ಹೇಳಿದರು. ಬುಧವಾರ ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10ಕ್ಕೆ ನೂತನ ಶತಮಾನೋತ್ಸವ ಭವನವನ್ನು ವಿಧಾನಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಉದ್ಘಾಟಿಸಲಿದ್ದಾರೆ. ಬ್ಯಾಂಕ್‌ನ ನವೀಕೃತ ಕಟ್ಟಡವನ್ನು ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಉದ್ಘಾಟಿಸಲಿದ್ದಾರೆ ಎಂದರು. ಶತಮಾನೋತ್ಸವ ಕಾರ್ಯಕ್ರಮವನ್ನು ಸಹಕಾರ ಸಚಿವ ಎಚ್.ಎಸ್.ಮಹಾದೇವಪ್ರಸಾದ್ ಉದ್ಘಾಟಿಸಲಿದ್ದು, ಸ್ಮರಣ ಸಂಚಿಕೆಯನ್ನು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ಬಿಡುಗಡೆ ಮಾಡಲಿದ್ದಾರೆ. ಬ್ಯಾಂಕಿನ ಲಾಂಛನ ಮತ್ತು ಧ್ಯೇಯವಾಕ್ಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯು.ಎಲ್. ಸುಭಾಶ್‌ಚಂದ್ರ ವಹಿಸುವರು ಎಂದು ತಿಳಿಸಿದರು. ವೇದಿಕೆಯಲ್ಲಿ ಸಂಸದರಾದ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪಸೇರಿದಂತೆ ಹಲವು ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ . ಕೆಳದಿ ರಾಜಗುರು ಹಿರೇಮಠದ ಡಾ. ಮಹೇಶ್ವರ ಶಿವಾಚಾರ್ಯ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಮಾಹಿತಿ ನೀಡಿದರು. ಗೋಷ್ಠಿಯಲ್ಲಿ ಬ್ಯಾಂಕ್‌ನ ಉಪಾಧ್ಯಕ್ಷ ನಾರಾಯಣ ಅರಮನೆಕೇರಿ, ವಿ.ಗುರು, ಉದಯ ಕಾಮತ್, ಎಸ್.ಗಜಾನನ ಜೋಯಿಸ್, ಕೃಷ್ಣಮೂರ್ತಿ ಭಂಡಾರಿ, ದೇವೇಂದ್ರ ಬಿ., ವಿನಾಯಕರಾವ್ ರಂಗಧೋಳ್, ವಿ.ಶಂಕರ್, ಶೋಭಾ ಲಂಬೋಧರ್, ಬಿ.ವಿ.ರವೀಂದ್ರನಾಥ್ ಮತ್ತಿತರರು ಹಾಜರಿದ್ದರು.