ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಗೆ ಅರ್ಜಿ ಆಹ್ವಾನ
Update: 2016-05-04 22:51 IST
ಮಂಗಳೂರು, ಮೇ 4:ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ತಾಲೂಕು ಆಸ್ಪತ್ರೆ ಪುತ್ತೂರು,ಬೆಳ್ತಂಗಡಿ, ಸುಳ್ಯದ ರಕ್ತ ಶೇಖರಣಾ ಘಟಕಕ್ಕೆ ಗುತ್ತಿಗೆ ಆಧಾರದ ಮೇಲೆ ತಲಾ 1 ಪ್ರಯೋಗ ಶಾಲಾ ತಂತ್ರಜ್ಞರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.
ಆಸಕ್ತರು ಮೇ 18 ರಂದು ಸಂಜೆ 4 ಗಂಟೆಯೊಳಗೆ ಜಿಲ್ಲಾ ಏಡ್ಸ್ ತಡೆಗಟ್ಟುಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನೆಹರೂ ಮೈದಾನ ರಸ್ತೆ, ಮಂಗಳೂರು ಇಲ್ಲಿಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗೆ ದೂ.ಸಂ.: 0824-2441710ನ್ನು ಸಂಪರ್ಕಿಸುವಂತೆ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.