ರಾಷ್ಟ್ರಮಟ್ಟದ ವಿದ್ಯಾರ್ಥಿ ಕಾರ್ಯಾಗಾರ

Update: 2016-05-04 18:17 GMT

ಪುತ್ತೂರು, ಮೇ 4: ವಿದ್ಯಾರ್ಥಿ ಜೀವನದಲ್ಲಿ ಪ್ರಾಜೆಕ್ಟ್ ಎನ್ನುವುದು ಒಂದು ಸವಾಲಿನ ವಿಷಯ. ಸರಿಯಾಗಿ ಅರ್ಥೈಸಿಕೊಂಡು ಪೂರ್ಣಗೊಳಿಸಿದಾಗ ಸಿಗುವ ತೃಪ್ತಿ ಅವರ್ಣನೀಯ ಎಂದು ಸುರತ್ಕಲ್ ಎನ್‌ಐಟಿಕೆಯ ಲೋಹ ಮತ್ತು ವಸ್ತು ವಿಜ್ಞಾನ ಇಂಜಿನಿಯರಿಂಗ್ ವಿಭಾಗದ ಪ್ರೊ.ಡಾ. ನಾರಾಯಣ ಪ್ರಭು ಹೇಳಿದರು. ಇಲ್ಲಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುತ್ತಿರುವ ರಾಷ್ಟ್ರಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ‘ಜ್ಞಾನ ಸಂಗಮ-2016’ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಬಲರಾಮ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.
ಪ್ರಾಂಶುಪಾಲೆ ಪ್ರೊ. ಉಷಾ ಕಿರಣ್ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕ ಪ್ರೊ. ಹರೀಶ್ ಎಸ್.ಆರ್. ವಂದಿಸಿದರು. ಉಪನ್ಯಾಸಕಿ ಪ್ರೊ. ನಿಶಾ ಜಿ. ಆರ್. ಮತ್ತು ಪ್ರೊ. ಜೋವಿಟಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News