ಉತ್ತರಾಖಂಡ ವಿವಾದ: ಕೇಂದ್ರದ ಆದೇಶ ವಜಾಗೊಳಿಸಿದ್ದ ಮುಖ್ಯ ನ್ಯಾಯಾಧೀಶರ ವರ್ಗ
Update: 2016-05-04 23:49 IST
ಹೊಸದಿಲ್ಲಿ, ಮೇ 4: ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಡಳಿತ ಹೇರಿದ ಕೇಂದ್ರದ ಆದೇಶವನ್ನು ವಜಾಗೊಳಿಸಿದ್ದ ಉತ್ತರಾಖಂಡ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ಆಂಧ್ರ ಪ್ರದೇಶ ಹೈಕೋರ್ಟ್‌ಗೆ ವರ್ಗವಾಗಿದ್ದಾರೆ. ನ್ಯಾ.ಜೋಸೆಫ್ ನೇತೃತ್ವದ ಉತ್ತರಾಖಂಡ ಹೈಕೋರ್ಟ್ ನ್ಯಾಯಪೀಠವು ಕಳೆದ ತಿಂಗಳು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ವಜಾಗೊಳಿಸಿತ್ತು ಹಾಗೂ ಕೇಂದ್ರದ ಕ್ರಮವನ್ನು ತರಾಟೆಗೆ ತೆಗೆದುಕೊಂಡಿತ್ತು.
ಆಂಧ್ರ ಪ್ರದೇಶ ಹೈಕೋರ್ಟ್‌ನ ಪ್ರಭಾರ ಮುಖ್ಯನ್ಯಾಯಮೂರ್ತಿ ಮಧ್ಯಪ್ರದೇಶದ ನೂತನ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ. ಮಧ್ಯಪ್ರದೇಶದ ಮುಖ್ಯ ನ್ಯಾಯಮೂರ್ತಿ ಅಜಯ್ ಮಾಣಿಕ್ ರಾವ್ ಖಾನ್ವಿಲ್ಕರ್ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆಯುವ ಸಂಭವವಿದೆ.