ಬ್ಯಾಡ್ಮಿಂಟನ್ ರ್ಯಾಂಕಿಂಗ್: ಜ್ವಾಲಾ-ಅಶ್ವಿನಿಗೆ 14ನೆ ಸ್ಥಾನ

Update: 2016-05-05 16:54 GMT

ಹೊಸದಿಲ್ಲಿ, ಮೇ 5: ವಿಶ್ವ ಬ್ಯಾಡ್ಮಿಂಟನ್ ಫೆಡರೇಶನ್(ಬಿಡಬ್ಲುಎಫ್) ಗುರುವಾರ ಬಿಡುಗಡೆ ಮಾಡಿರುವ ರ್ಯಾಂಕಿಂಗ್‌ನಲ್ಲಿ 2010ರ ಕಾಮನ್‌ವೆಲ್ತ್ ಗೇಮ್ಸ್ ಚಾಂಪಿಯನ್ ಜ್ವಾಲಾ ಗುಟ್ಟಾ ಹಾಗೂ ಅಶ್ವಿನಿ ಪೊನ್ನಪ್ಪ ಮಹಿಳೆಯರ ಡಬಲ್ಸ್ ರ್ಯಾಂಕಿಂಗ್‌ನಲ್ಲಿ ಒಂದು ಸ್ಥಾನ ಭಡ್ತಿ ಪಡೆದು 14ನೆ ಸ್ಥಾನ ತಲುಪಿದ್ದಾರೆ.

ಪುರುಷರ ಡಬಲ್ಸ್ ಜೋಡಿ ಮನು ಅತ್ರಿ ಹಾಗೂ ಬಿ. ಸುಮೀತ್ ರೆಡ್ಡಿ 20ನೆ ಸ್ಥಾನಕ್ಕೆ ಕುಸಿದಿದ್ದಾರೆ.

ಪುರುಷರ ಸಿಂಗಲ್ಸ್‌ನಲ್ಲಿ ಎಚ್.ಎಸ್.ಪ್ರಣಯ್ 2 ಸ್ಥಾನ ಭಡ್ತಿ ಪಡೆದು 25ನೆ ಸ್ಥಾನ ತಲುಪಿದ್ದರೆ, ಕಿಡಂಬಿ ಶ್ರೀಕಾಂತ್ ಹಾಗೂ ಅಜಯ್ ಜಯರಾಮ್ ಕ್ರಮವಾಗಿ 12ನೆ ಹಾಗೂ 21ನೆ ಸ್ಥಾನದಲ್ಲಿದ್ದಾರೆ. ಚೀನಾದ ಚೆನ್ ಲಾಂಗ್ ನಂ.1 ಸ್ಥಾನ ಕಾಯ್ದುಕೊಂಡಿದ್ದಾರೆ.

ಮಹಿಳೆಯರ ಸಿಂಗಲ್ಸ್‌ನಲ್ಲಿ ಪ್ರಮುಖ ಬದಲಾವಣೆಯಾಗಿಲ್ಲ. ಸೈನಾ ನೆಹ್ವಾಲ್ ಹಾಗೂ ಪಿ.ವಿ. ಸಿಂಧು ಕ್ರಮವಾಗಿ 8ನೆ ಹಾಗೂ 10ನೆ ಸ್ಥಾನ ಉಳಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News