×
Ad

ಮೇ 7ರಂದು ಬರ ಪರಿಸ್ಥಿತಿ ಬಗ್ಗೆ ಪ್ರಧಾನಿಯೊಂದಿಗೆ ಸಿಎಂ ಚರ್ಚೆ

Update: 2016-05-06 18:15 IST

ಬೆಂಗಳೂರು,ಮೇ.6: ರಾಜ್ಯದ ಬರ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮೇ 7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಲಿದ್ದಾರೆ.

ಬರ, ಕುಡಿಯುವ ನೀರು ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆಯೂ ಮಾಹಿತಿ ಪಡೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ದೆಹಲಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.

ಕರ್ನಾಟಕವಲ್ಲದೇ ಮಹಾರಾಷ್ಟ್ರ ಹಾಗೂಉತ್ತರ ಪ್ರದೇಶಗಳಲ್ಲಿ ಬರಗಾಲ ಮತ್ತು ನೀರಿನ ಕೊರತೆ ತೀವ್ರವಾಗಿ ಕಾಡುತ್ತಿರುವ ಹಿನ್ನೆಲೆ ಬರ ಪರಿಸ್ಥಿತಿ ಕುರಿತು ಚರ್ಚೆ ನಡೆಸಲುದೆಹಲಿಗೆ ಬರುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದಾರೆ.

ಪ್ರಧಾನಿ ಮೋದಿ,ಮೂರೂರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರತ್ಯೇಕವಾಗಿ ಚರ್ಚೆ ನಡೆಸಲಿದ್ದು, ಆಯಾ ರಾಜ್ಯಗಳಲ್ಲಿ ಬರಗಾಲ ಪರಿಸ್ಥಿತಿ ಹೇಗಿದೆ.ಅದಕ್ಕೆ ಪರಿಹಾರ ಕಂಡುಕೊಳ್ಳುವುದು ಹೇಗೆ ಎಂಬುದರ ಬಗ್ಗೆ ಚರ್ಚಿಸಿ ಮಾಹಿತಿ ಪಡೆದುಕೊಳ್ಳಲಿದ್ದಾರೆ.

ಬರ ಪರಿಸ್ಥಿತಿ ನಿವಾರಣೆಗಾಗಿ ರಾಜ್ಯಗಳಿಗೆ ಕೇಂದ್ರ ಸರ್ಕಾರ ನೆರವು ನೀಡುತ್ತಿದ್ದರೂ ಪರಿಸ್ಥಿತಿಯನ್ನು ಆಯಾ ರಾಜ್ಯಗಳೇ ಎದುರಿಸಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ,ಇಬ್ಬರು ಅಧಿಕಾರಿಗಳ ಜೊತೆಬರ ಪರಿಸ್ಥಿತಿ ಕುರಿತು ಚರ್ಚಿಸಲು ದೆಹಲಿಗೆ ಆಗಮಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸೂಚಿಸಿದ್ದಾರೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News