ಪ್ರೇಮ ವೈಫಲ್ಯದಿಂದ ಬೇಸತ್ತು ಯುವಕ ಆತ್ಮಹತ್ಯೆ
Update: 2016-05-06 21:51 IST
ಮಂಗಳೂರು, ಮೇ 6: ಪ್ರೇಮವೈಫಲ್ಯದಿಂದ ನೊಂದ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಖಾಸಗಿ ಆಸ್ಪತ್ರೆಯ ವಸತಿಗೃಹದಲ್ಲಿ ನಡೆದಿದೆ.
ಕೇರಳದ ಪಾಲ್ಗಾಟ್‌ನ ಅಖಿಲ್ (23) ಖಾಸಗಿ ಆಸ್ಪತ್ರೆಯಲ್ಲಿ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಇಂದು ಬೆಳಿಗ್ಗೆ ತಮ್ಮ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ. ಪ್ರೇಮವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.