ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ: 250 ಗ್ರಾಂ ಗಾಂಜಾ ವಶ
Update: 2016-05-06 21:53 IST
ಮಂಗಳೂರು, ಮೇ 6: ತಣ್ಣೀರುಬಾವಿ ಬೀಚ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಅಬ್ದುಲ್ ರಹೀಂ ಯಾನೆ ಗೂಡ್ಸ್ ರಹೀಂ ಯಾನೆ ಕಂಡಿ ರಹೀಂ ಯಾನೆ ರಹೀಂ (45) ಎಂಬಾತನನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.
ಇಂದು ಬೆಳಗ್ಗೆ ಪಣಂಬೂರು ಠಾಣಾ ಪಿಎಸ್ಸೈ ಸತೀಶ್ ಮತ್ತು ಸಿಬ್ಬಂದಿ ಖಚಿತ ವರ್ತಮಾನದಂತೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಈತನ ವಶದಲ್ಲಿದ್ದ 4,000 ರೂ. ವೌಲ್ಯದ 250 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.