×
Ad

ಸಾಗರ ತಾಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

Update: 2016-05-06 22:06 IST

ಸಾಗರ, ಮೇ 6: ಇಲ್ಲಿನ ತಾಲೂಕು ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಬಿ.ಎಚ್.ಮಲ್ಲಿಕಾರ್ಜುನ ಹಕ್ರೆ ಮತ್ತು ಉಪಾಧ್ಯಕ್ಷರಾಗಿ ಜೆಡಿಎಸ್‌ನ ಪರಶುರಾಮ ಕೆ.ಎಚ್. ಆಯ್ಕೆಯಾಗಿದ್ದಾರೆ.

  

  

ತಾಲೂಕು ಪಂಚಾಯತ್‌ನಲ್ಲಿ ಬಿಜೆಪಿ 6, ಕಾಂಗ್ರೆಸ್ 4, ಜೆಡಿಎಸ್ 2 ಮತ್ತು ಪಕ್ಷೇತರರು 3 ಸದಸ್ಯರು ಇದ್ದಾರೆ. ತ್ಯಾಗರ್ತಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸೋಮಶೇಖರ್ ಬಿಜೆಪಿಯನ್ನು ಬೆಂಬಲಿಸಿದ ಕಾರಣ ಬಿಜೆಪಿಯ ಬಲ 7 ಸ್ಥಾನಕ್ಕೆ ಏರಿತ್ತು. ಶುಕ್ರವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜೆಡಿಎಸ್‌ನ ಇಬ್ಬರು ಹಾಗೂ ಪಕ್ಷೇತರರು ಇಬ್ಬರು ಬೆಂಬಲ ನೀಡಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಬಿ.ಎಚ್.ಮಲ್ಲಿಕಾರ್ಜುನ ಹಕ್ರೆ 8 ಮತ ಪಡೆದು ಜಯಗಳಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರಶುರಾಮ್ 8 ಮತವನ್ನು ಪಡೆದು ಅಧಿಕಾರದ ಚುಕ್ಕಾಣಿ ಹಿಡಿದರು. ಬಿಜೆಪಿಯಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ರಘುಪತಿ ಭಟ್ 7 ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸುವರ್ಣ ಟೀಕಪ್ಪ 7 ಮತಗಳನ್ನು ಪಡೆದು ಪರಾಭವಗೊಂಡರು. ಚುನಾವಣಾಧಿಕಾರಿಯಾಗಿ ಉಪವಿಭಾಗಾಧಿಕಾರಿ ಡಿ.ಎಂ. ಸತೀಶ ಕುಮಾರ್ ಹಾಗೂ ಸಹಾಯಕರಾಗಿ ತಹಶೀಲ್ದಾರ್ ಎನ್.ಟಿ. ಧರ್ಮೋಜಿರಾವ್, ಕಾರ್ಯನಿರ್ವಾಹಣಾಧಿಕಾರಿ ಸಿದ್ದಲಿಂಗಯ್ಯ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News