×
Ad

ಅರಣ್ಯ ಹಕು್ಕ ಕಾಯೆ್ದ ಅನುಷ್ಠಾನದಲ್ಲಿ ವಿಳಂಬ: ಸ್ಪೀಕರ್ ಕಾಗೋಡು ತಿಮ್ಮಪ್ಪ

Update: 2016-05-06 22:08 IST

ಶಿವಮೊಗ್ಗ, ಮೇ 6: ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನದಲ್ಲಾಗುತ್ತಿರುವ ವಿಳಂಬದ ಬಗ್ಗೆ ಈ ಹಿಂದೆ ರಾಜ್ಯ ಸರಕಾರದ ವಿರುದ್ಧ ವಿಧಾನಸಭೆ ಕಲಾಪದಲ್ಲಿ ಕಿಡಿಕಾರಿದ್ದ ಸ್ಪೀಕರ್ ಕಾಗೋಡು ತಿಮ್ಮಪ್ಪರವರು, ಇದೀಗ ತವರು ಜಿಲ್ಲೆಯ ಅಧಿಕಾರಿಗಳ ವಿರುದ್ಧ ಹರಿಹಾಯ್ದಿದ್ದಾರೆ. ಕಾಲಾವಧಿಯೊಳಗೆ ಅರ್ಹರಿಗೆ ಹಕ್ಕುಪತ್ರ ವಿತರಣೆ ಮಾಡಬೇಕು. ಇಲ್ಲದಿದ್ದರೆ ತಾವು ಮರ್ಯಾದೆಯಿಂದ ಇರೋಕ್ಕೆ ಸಾಧ್ಯವಿಲ್ಲ ಎಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿವಿಧ ಇಲಾಖಾ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು ಅವರು, ಅರಣ್ಯ ಹಕ್ಕು ಕಾಯ್ದೆಯ ಅನುಷ್ಠಾನದ ಬಗ್ಗೆ ಪ್ರಸ್ತಾಪಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.. ಅನುಷ್ಠಾನವಾಗುತ್ತಿಲ್ಲವೇಕೆ?: ಅರಣ್ಯ ಹಕ್ಕು ಕಾಯ್ದೆಯ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಈಗಾಗಲೇ ಸಲಹೆ- ಸೂಚನೆ ಒಳಗೊಂಡ ಸುತ್ತೋಲೆಯನ್ನು ಸರಕಾರ ಹೊರಡಿಸಿದೆ. ಸರ್ವೇ ಕೂಡ ಮುಗಿದಿದೆ. ಆದರೆ ಸರಕಾರಕ್ಕೆ ನಕ್ಷೆ ಹೋಗಿಲ್ಲ ಯಾಕೆ ಎಂದು ಅಧಿಕಾರಿಗಳ ವಿರುದ್ಧ ಹಿಗ್ಗಾಮುಗ್ಗ ಗುಡುಗಿದರು. ಕೂಗುತ್ತಾ ಕೂಗುತ್ತಾ ಸಾಕಾಗಿ ಹೋಗಿದೆ. ಜನರ ಮುಂದೆ ಮಾನ- ಮರ್ಯಾದೆ ಇಲ್ಲದಂತಾಗಿದೆ. ಬರೀ ಕೂಗು ತ್ತಾರೆ. ಯಾವುದೇ ಕೆಲಸ ವಾಗುವುದಿಲ್ಲ ಎಂದು ಜನರು ಮಾತನಾಡಿಕೊಳ್ಳುವಂತಾಗಿದೆೞಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ಇದು ಭೂಮಿಗಾಗಿ ಹೋರಾಟ ನಡೆಸಿದ ಇತಿಹಾಸವಿರುವ ಜಿಲ್ಲೆಯಾಗಿದೆ. ಆದರೆ ಈ ಜಿಲ್ಲೆಯಲ್ಲಿಯೇ ಭೂಮಿಯ ಹಕ್ಕಿಗಾಗಿ ಹೋರಾಟ ನಡೆಸು ವಂತಾಗಿರುವುದು ವಿಪರ್ಯಾಸದ ಸಂಗತಿಯಾಗಿದೆ. ಕಳೆದ 10 ವರ್ಷಗಳಿಂದ ಅರ್ಜಿ ವಿಲೇವಾರಿ ಮಾಡದಿದ್ದರೆ ಹೇಗೆ? ಸರಿಯಾಗಿ ಕೆಲಸ ಮಾಡದ ಅರಣ್ಯ ಹಕ್ಕು ಸಮಿತಿಗಳನ್ನು ಕಿತ್ತು ಹಾಕಿ ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮೇ ತಿಂಗಳಾಂತ್ಯದಲ್ಲಿ ಕನಿಷ್ಠ ಕೆಲಸವಾದರೂ ಆಗಬೇಕು. ಇಲ್ಲದಿದ್ದರೆ ನಾನು ಮರ್ಯಾದೆಯಿಂದ ಇರಕ್ಕೋ ಸಾಧ್ಯವೇ ಇಲ್ಲ ಎಂದು ಜಿಲ್ಲಾಡಳಿತಕ್ಕೆ ಕಾಗೋಡು ತಿಮ್ಮಪ್ಪ ನೇರ ಎಚ್ಚರಿಕೆಯ ಸಂದೇಶ ರವಾನಿಸಿದರು. ತೀರ್ಥಹಳ್ಳಿ ಕಳಪೆ!: ಸಾ

ಗರ ತಾಲೂಕಿಗೆ ಹೋಲಿಕೆ ಮಾಡಿದರೆ ಅರಣ್ಯ ಹಕ್ಕು ಕಾಯ್ದೆ ಅನುಷ್ಠಾನದಲ್ಲಿ ತೀರ್ಥಹಳ್ಳಿ ತಾಲೂಕು ಹಿಂದಿದ್ದು, ಅತ್ಯಂತ ಕೆಟ್ಟ ಸ್ಥಿತಿಯಲ್ಲಿದೆ ಎಂದು ತಮ್ಮ ಪಕ್ಕದಲ್ಲಿಯೇ ಕುಳಿತಿದ್ದ ಸಾಗರ ಕ್ಷೇತ್ರದ ಶಾಸಕರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್‌ಹೇಳಿದಾಗ, ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾಗೋಡು, ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯ ಕ್ರಮಕೈಗೊಳ್ಳಿ ಎಂದು ಸಚಿವರಿಗೆ ಸಲಹೆ ನೀಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News