×
Ad

ಹಣ ಬಿಡುಗಡೆ ಮಾಡದಿದ್ದರೆ ಸಿಎಂ ಮನೆ ಮುಂದೆ ಧರಣಿ ಮಾಡಿ: ಸಚಿವ ಕಿಮ್ಮನೆ ರತ್ನಾಕರ

Update: 2016-05-06 22:12 IST

ಶಿವಮೊಗ್ಗ, ಮೇ 6: ‘ಅನುದಾನ ಬಿಡುಗಡೆ ಮಾಡದಿದ್ದರೇ ಮುಖ್ಯಮಂತ್ರಿ ಮನೆ ಮುಂಭಾಗ ಧರಣಿ ಕುಳಿತುಕೊಳ್ಳಿ. ಅದೆಲ್ಲ ಗೊತ್ತಿಲ್ಲ ಜಿಲ್ಲೆಗೆ ಅಗತ್ಯವಾದ ಅನುದಾನ ತರುವುದು ನಿಮ್ಮ ಜವಾಬ್ದಾರಿ ಅಷ್ಟೆ’ ಹೀಗೆಂದು ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರಗೆ ತಾಕೀತು ಮಾಡಿದ್ದು ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪರವರು. ಸ್ಪೀಕರ್‌ರವರ ಈ ಫರ್ಮಾನ್‌ಗೆ ಅವರ ಪಕ್ಕದಲ್ಲಿಯೇ ಕುಳಿತ್ತಿದ್ದ ಕಿಮ್ಮನೆ ರತ್ನಾಕರ್ ಅವರು ಕ್ಷಣ

ಾಲ ತಬ್ಬಿಬ್ಬಾಗುವಂತಾಯಿತು. ಸ್ಪೀಕರ್‌ರವರ ಈ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡದೆ ವೌನಕ್ಕೆ ಶರಣಾಗುವಂತಾಯಿತು. *ಸಭೆ: ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಈ ಸಭೆಯಲ್ಲಿ ಭಾಗವಹಿಸಿದ್ದ ಸ್ಪೀಕರ್ ಕಾಗೋಡು ತಿಮ್ಮಪ್ಪರವರು ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ್‌ರವರ ವಿರುದ್ಧ ಕೆಲ ವಿಷಯಗಳಿಗೆ ಸಂಬಂಧಿಸಿದಂತೆ ಅಸಮಾಧಾನ ಮಾತುಗಳಲ್ಲಿಯೇ ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡರು. *ಬಾಕಿ ಬಿಡುಗಡೆಯಾಗಬೇಕು: ಕುಡಿಯುವ ನೀರಿನ ಕಾಮಗಾರಿಗೆ ಯಾವುದೇ ಕಾರಣಕ್ಕೂ ಅನುದಾನದ ಕೊರತೆಯಾಗಬಾರದು. ಪ್ರಸ್ತುತ ಬಿಡುಗಡೆಯಾಗಿರುವ ಅನುದಾನ ಕಾಲಮಿತಿಯಲ್ಲಿ ಸದ್ಭಳಕೆಯಾಗಬೇಕು. ಈ ಕುರಿತಂತೆ ಸರಕಾರಕ್ಕೆ ವರದಿ ಸಲ್ಲಿಸಬೇಕು. ಇದರಿಂದ ಹೊಸದಾಗಿ ಅನುದಾನ ತರಲು ಸಾಧ್ಯವಾಗಲಿದೆ ಎಂದು ಸ್ಪೀಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಜಿಲ್ಲಾ ಗ್ರಾಮೀಣ ನೀರು ಪೂರೈಕೆ ಹಾಗೂ ಸ್ವಚ್ಛತಾ ವಿಭಾಗದ ಕಾರ್ಯಪಾಲಕ ಅಭಿಯಂತರ ಎಸ್.ಎಂ.ಹರೀಶ್ ಮಾತನಾಡಿ, ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಮುಕ್ತಾಯ ಗೊಂಡಿರುವ ಕಾಮಗಾರಿಗಳಿಗೆ 15 ಕೋಟಿ ರೂ. ಹಾಗೂ ಹಾಲಿ ನಡೆ ಯುತ್ತಿರುವ ಕೆಲಸಗಳಿಗೆ 31 ಕೋಟಿ ರೂ. ಅನುದಾನ ಬೇಕಾಗಿದೆ ಎಂದು ಸ್ಪೀಕರ್‌ರವರ ಗಮನಕ್ಕೆ ತಂದರು.

*ಜವಾಬ್ದಾರಿ ಹೆಚ್ಚಿದೆ: ಅಧಿಕಾರಿಗಳ ಮೇಲೆ ಜವಾಬ್ದಾರಿ ಹೆಚ್ಚಿದೆ. ಅತ್ಯಂತ ಎಚ್ಚರಿಕೆಯಿಂದ ಕೆಲಸ ಮಾಡಿ. ಸರಿಯಾಗಿ ಕ್ರಿಯಾ ಯೋಜನೆ ರೂಪಿಸಿ. ಇದಕ್ಕೆ ಅನುಗುಣವಾಗಿ ಅನುದಾನ ನಿಗದಿ ಮಾಡಿ. ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಿ. ಹಲವೆಡೆ ನಡೆಯುತ್ತಿರುವ ಕುಡಿಯುವ ನೀರಿನ ಕಾಮಗಾರಿಗಳಲ್ಲಿ ಗುಣಮಟ್ಟವಿಲ್ಲವಾಗಿದೆ. ಅಂದಾಜು ಪಟ್ಟಿಗೆ ಅನುಗುಣವಾಗಿ ಕೆಲಸ ನಡೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. *ಬದ್ಧತೆಯಿಲ್ಲ:

ಪ್ರಸ್ತುತ ಕೆಲ ಜನಪ್ರತಿನಿಧಿಗಳಿಗೆ ಬದ್ಧತೆಯಿಲ್ಲವಾಗಿದೆ. ಇದರಿಂದ ಅಧಿಕಾರಿಗಳ ಮೇಲೆ ಜವಾಬ್ದಾರಿ ಹೆಚ್ಚಿದೆ. ಜಿಪಂ ಅಧ್ಯಕ್ಷ, ಉಪಾಧ್ಯಕ್ಷರು ತಾಲೂಕುಗಳಿಗೆ ಭೇಟಿ ನೀಡಬೇಕು. ಗ್ರಾಮಸ್ಥರ ಅಹವಾಲು ಆಲಿಸಿ ಸಮಸ್ಯೆ ಪರಿ ಹಾರಕ್ಕೆ ಕ್ರಮಕೈಗೊಳ್ಳಿ ಎಂದು ಇದೇ ಸಂದರ್ಭದಲ್ಲಿ ಕಿವಿಮಾತು ಹೇಳಿದರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕಿಮ್ಮನೆ ರತ್ನಾಕರ, ಶಾಸಕ ಕೆ.ಬಿ.ಪ್ರಸನ್ನಕುಮಾರ್, ಜಿಪಂ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಜಿಲ್ಲಾಧಿಕಾರಿ ವಿ.ಪಿ.ಇಕ್ಕೇರಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ರಾಕೇಶ್‌ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚೆನ್ನಣ್ಣನವರ್, ಅಪರ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಸೇರಿದಂತೆ ಮೊದಲಾದವರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News