×
Ad

ಶಾಲಾ ಪಠ್ಯಕ್ರಮದಲ್ಲಿ ಯೋಗ: ರಾಜ್ಯಗಳಿಗೆ ಕೇಂದ್ರದ ಸೂಚನೆ

Update: 2016-05-06 23:45 IST

ಹೊಸದಿಲ್ಲಿ,ಮೇ 6: ಶಾಲಾ ಪಠ್ಯಕ್ರಮಗಳಲ್ಲಿ ಯೋಗವನ್ನು ಐಚ್ಛಿಕ ವಿಷಯವನ್ನಾಗಿ ಸೇರಿಸುವಂತೆ ಕೇಂದ್ರವು ರಾಜ್ಯ ಸರಕಾರಗಳಿಗೆ ಸೂಚಿಸಿದೆ.

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಈ ಸಂಬಂಧ ರಾಜ್ಯ ಸರಕಾರಗಳಿಗೆ ಪತ್ರ ಬರೆದಿದೆ. ಇದರಿಂದ ಆಸಕ್ತ ವಿದ್ಯಾರ್ಥಿಗಳು ಯೋಗವನ್ನು ಒಂದು ವಿಷಯವನ್ನಾಗಿ ಆಯ್ಕೆ ಮಾಡಿಕೊಳ್ಳಬಹುದಾಗಿದೆ, ಆದರೆ ಇದು ಕಡ್ಡಾಯ ವಿಷಯವಾಗಿರುವುದಿಲ್ಲ ಎಂದು ಸಹಾಯಕ ಆಯುಷ್ ಸಚಿವ ಶ್ರೀಪಾದ ವೈ.ನಾಯ್ಕಾ ಅವರು ಶುಕ್ರವಾರ ಲೋಕಸಭೆಯಲ್ಲಿ ತಿಳಿಸಿದರು.
ಮುಂದಿನ ಶೈಕ್ಷಣಿಕ ವರ್ಷದಿಂದ ಯೋಗ ಶಾಲಾ ಪಠ್ಯಕ್ರಮದ ಭಾಗವಾಗಿರುತ್ತದೆ ಎಂದು ನಾವು ಆಶಿಸಿದ್ದೇವೆ ಎಂದರು.
ಪೊಲೀಸ್ ಸಿಬ್ಬಂದಿಗೆ ಯೋಗವನ್ನು ಕಡ್ಡಾಯಗೊಳಿಸಲಾಗಿದ್ದು, ರಕ್ಷಣಾ ಸಿಬ್ಬಂದಿಗೂ ಅದನ್ನು ಕಡ್ಡಾಯಗೊಳಿಸಲು ಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದರು.


 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News