×
Ad

ಅನರ್ಹ ಶಾಸಕರ ಅರ್ಜಿಯ ವಿಚಾರಣೆ ; ಸೋಮವಾರಕ್ಕೆ ಆದೇಶ ಕಾಯ್ದಿರಿಸಿದ ಉತ್ತರಾಖಂಡ ಹೈಕೋರ್ಟ್‌

Update: 2016-05-07 14:45 IST

ಹೊಸದಿಲ್ಲಿ,ಮೇ7: ಉತ್ತರಾಖಂಡ ವಿಧಾನಸಭೆಯಲ್ಲಿ ಅನರ್ಹಗೊಂಡಿರುವ 9 ಮಂದಿ ಶಾಸಕರು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯ ತೀರ್ಪನ್ನು ಸೋಮವಾರಕ್ಕೆ ಮುಂದೂಡಲಾಗಿದೆ.
ಅನರ್ಹಗೊಂಡಿರುವ ಶಾಸಕರ ಅರ್ಜಿಯ ವಿಚಾರಣೆ ನಡೆಸಿದ ಉತ್ತರಾಖಂಡ್‌ ಹೈಕೋರ್ಟ್‌ ತೀರ್ಪನ್ನು ಸೋಮವಾರಕ್ಕೆ ಕಾಯ್ದಿರಿಸಿದೆ.
ರಾಷ್ಟ್ರಪತಿ ಆಡಳಿತ ಜಾರಿಯಲ್ಲಿರುವ ಉತ್ತರಾಖಂಡದಲ್ಲಿ ಮೇ 10ರಂದು ಬಹುಮತ ಸಾಬೀತುಪಡಿಸುವಂತೆ ಪದಚ್ಯುತ ಮುಖ್ಯಮಂತ್ರಿ ಹರೀಶ್‌ ರಾವತ್‌ ಅವರಿಗೆ ಸುಪ್ರೀಂಕೋರ್ಟ್‌ ಸೂಚಿಸಿತ್ತು.
ಮಂಗಳವಾರ ಬೆಳಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ವಿಶ್ವಾಸಮತ ಸಾಬೀತು ಪ್ರಕ್ರಿಯೆ ನಡೆಯಲಿದೆ’ ಎಂದು  ನ್ಯಾಯಮೂರ್ತಿಗಳಾದ ದೀಪಕ್‌ ಮಿಶ್ರಾ ಮತ್ತು ಶಿವಕೀರ್ತಿ ಸಿಂಗ್‌ ಅವರಿದ್ದ ಪೀಠ ಶುಕ್ರವಾರ ತೀರ್ಪು ನೀಡಿತ್ತು.  ಇದೇ ವೇಳೆ ಅನರ್ಹಗೊಂಡಿರುವ ಒಂಬತ್ತು ಶಾಸಕರು  ಬಹುಮತ ಸಾಬೀತು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಪೀಠ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News