×
Ad

ಮಂಗಳೂರು ತಾ.ಪಂ.ನ ಅಧ್ಯಕ್ಷರಾಗಿ ಮುಹಮ್ಮದ್ ಮೋನು,ಉಪಾಧ್ಯಕ್ಷರಾಗಿ ಪೂರ್ಣಿಮಾ ಗಣೇಶ್ ಪೂಜಾರಿ ಆಯ್ಕೆ

Update: 2016-05-07 17:40 IST

ಮಂಗಳೂರು, ಮೇ 7: ಮಂಗಳೂರು ತಾ.ಪಂ.ನ ಅಧ್ಯಕ್ಷರಾಗಿ ಮುಹಮ್ಮದ್ ಮೋನು ಹಾಗೂ ಉಪಾಧ್ಯಕ್ಷರಾಗಿ ಪೂರ್ಣಿಮಾ ಗಣೇಶ್ ಪೂಜಾರಿ ಆಯ್ಕೆ ಆಯ್ಕೆಯಾಗಿದ್ದಾರೆ.

ತಾಲೂಕು ಪಂಚಾಯತ್‌ನ ಸಭಾಂಗಣದಲ್ಲಿ ಇಂದು ನಡೆದ ಚುನಾವಣೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

ಕೈ ಎತ್ತುವ ಮೂಲಕ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ರಾಮಚಂದ್ರ ಕುಂಪಲ ಪರ 19 ಮತಗಳು ಹಾಗೂ ಮುಹಮ್ಮದ್ ಮೋನು ಪರ 20 ಮತಗಳು ಚಲಾವಣೆಯಾದವು. ಒಂದು ಮತವನ್ನು ಹೆಚ್ಚು ಪಡೆದ ಹಿನ್ನೆಲೆಯಲ್ಲಿ ಮುಹಮ್ಮದ್ ಮೋನುರನ್ನು ಅಧ್ಯಕ್ಷರಾಗಿ ಘೋಷಿಸಲಾಯಿತು.

ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ವಜ್ರಾಕ್ಷಿ ಪಿ. ಶೆಟ್ಟಿ ಪರ 19 ಮತಗಳು ಹಾಗೂ ಪೂರ್ಣಿಮಾ ಶೆಟ್ಟಿ ಪರ 20 ಮತಗಳು ಚಲಾವಣೆಯಾದವು. ಮಂಗಳೂರು ಉಪ ವಿಭಾಗದ ಸಹಾಯಕ ಆಯುಕ್ತ ಡಾ.ಅಶೋಕ್ ಚುನಾವಣಾಧಿಕಾರಿಯಾಗಿ ಪ್ರಕ್ರಿಯೆ ನಿರ್ವಹಿಸಿದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಗೋಪಾಲ ಕೃಷ್ಣ ಭಟ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News