×
Ad

ಕೆೆಂಪಯ್ಯ ಅನುಚಿತ ವರ್ತನೆ: ಪತ್ರಕರ್ತರ ಸಂಘ ಧರಣಿ

Update: 2016-05-07 22:06 IST

ಶಿವಮೊಗ್ಗ, ಮೇ 7: ಗೃಹ ಸಚಿವರ ಸಲಹೆಗಾರ ಕೆಂಪಯ್ಯರವರು ಪತ್ರಕರ್ತರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಶನಿವಾರ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಧರಣಿ ನಡೆಸಿತು. ಮುಖ್ಯಮಂತ್ರಿ ತಮ್ಮ ಅಧೀನದಲ್ಲಿರುವ ಅಧಿಕಾರಿಗಳು ಅನುಚಿತವಾಗಿ ವರ್ತಿಸದಂತೆ ಸೂಚನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಕೆಂಪಯ್ಯರವರು ತಮ್ಮ ಹೇಳಿಕೆಯ ಬಗ್ಗೆ ಎರಡು ದಿನದಲ್ಲಿ ಬಹಿರಂಗ ಕ್ಷಮೆಯಾಚಿಸುವುದರ ಜೊತೆಗೆ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಸಂಘಟನೆ ಒತ್ತಾಯಿಸಿದೆ. ಧರಣಿಯಲ್ಲಿ ಸಂಘದ ಅಧ್ಯಕ್ಷ ಎನ್.ರವಿಕುಮಾರ್, ಖಜಾಂಚಿ ಗಜೇಂದ್ರಸ್ವಾಮಿ, ಪ್ರಧಾನ ಕಾರ್ಯದರ್ಶಿ ವೈದ್ಯ, ಹಿರಿಯ ಪತ್ರಕರ್ತ ಭಂಡಿಗಡಿ ನಂಜುಂಡಪ್ಪ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News