ವಿನಾಯಕ ಬಾಳಿಗ ಹತ್ಯೆ ಪ್ರಕರಣ: ನಮೋ ಬ್ರಿಗೇಡ್ ನಾಯಕ ನರೇಶ್ ಶೆಣೈ ಪ್ರಮುಖ ಆರೋಪಿ- ಪೊಲೀಸ್ ಆಯುಕ್ತ ಚಂದ್ರಶೇಖರ್
Update: 2016-05-09 12:09 IST
ಮಂಗಳೂರು, ಮೇ 9: ಆರ್ ಟಿಐ ಕಾರ್ಯಕರ್ತ ವಿನಾಯಕ ಬಾಳಿಗ ಹತ್ಯೆ ಪ್ರಕರಣದಲ್ಲಿ ನಮೋ ಬ್ರಿಗೇಡ್ ನಾಯಕ ನರೇಶ್ ಶೆಣೈ ಪ್ರಮುಖ ಆರೋಪಿ ಎಂದು ಮಂಗಳೂರು ಪೊಲೀಸ್ ಆಯುಕ್ತ ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ.
ಹತ್ಯೆಯಲ್ಲಿ ನರೇಶ್ ಶೆಣೈ ಕೈವಾಡದ ಬಗ್ಗೆ ಪ್ರಮುಖ ಸಾಕ್ಷ್ಯ ಸಿಕ್ಕಿದೆ, ಹತ್ಯೆಗೆ ಕಾರಣ ಏನು ಎಂಬುದು ಆತನ ಬಂಧನದ ಬಳಿಕ ತನಿಖೆ ನಡೆಸಲಾಗುವುದು ಎಂದರು.
ನರೇಶ್ ಜೊತೆ ಶ್ರೀಕಾಂತ್, ಶೈಲೇಶ್ ಕೂಡ ಪ್ರಮುಖ ಆರೋಪಿಗಳು ವಿಘ್ನೇಶ್ ಪಾತ್ರದ ಬಗ್ಗೆ ತನಿಖೆ ನಡೆಯಲಿದೆ. ನರೇಶ್ ದೇಶದಲ್ಲೇ ಇದ್ದು, ಪದೇ ಪದೇ ಅಡಗುತಾಣ ಬದಲಾವಣೆ ಮಾಡುತ್ತಿದ್ದಾನೆ. ಯಾವುದೇ ಸಂದರ್ಭದಲ್ಲೂ ಆರೋಪ ಪಟ್ಟಿ ಸಲ್ಲಿಕೆ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ. ವದಂತಿ ಹಬ್ಬಿಸುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಈ ಸಂದರ್ಭ ಮಂಗಳೂರು ಪೊಲೀಸ್ ಆಯುಕ್ತ ಚಂದ್ರಶೇಖರ್ ತಿಳಿಸಿದರು.