×
Ad

ಮೇ ತಿಂಗಳ ಅಂತ್ಯದೊಳಗೆ ಸಚಿವ ಸಂಪುಟ ಪುನಾರಚನೆ: ಮುಖ್ಯ ಮಂತ್ರಿ ಸಿದ್ದರಾಮಯ್ಯ

Update: 2016-05-09 12:15 IST

ಮೈಸೂರು, ಮೇ 9: ಈ ತಿಂಗಳೊಳಗೆ  ಸಚಿವ ಸಂಪುಟ ಪುನಾರಚನೆ ಮಾಡಲಾಗುವುದು. ಸಂಪುಟ ಪುನಾರಚನೆ ವೇಳೆ ಕೆಲವು ಸಚಿವರನ್ನು ಕೈ ಬಿಡಲಾಗುವುದು. ಕೆಲವು ಸಚಿವರನ್ನು ಮುಂದುವರಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಇಂದು ಮಾತನಾಡಿ ಸಚಿವ ಸಂಪುಟದಲ್ಲಿ ಹೊಸಬರಿಗೆ ಅವಕಾಶ ನೀಡಲಾಗುವುದು. ಸಂಪುಟ ಪುನಾರಚನೆಗೆ ಯಾವುದೇ ಮಾನದಂಡ ಇಲ್ಲ ಎಂದು ಸ್ಪಷ್ಟಪಡಿಸಿದರು.
ನಿಗಮ , ಮಂಡಳಿಗಳ ಅಧ್ಯಕ್ಷರ ಅಧಿಕಾರದ ಅವಧಿ ಮೂರು ತಿಂಗಳು ವಿಸ್ತರಿಸಲಾಗಿದೆ. ಹೈಕಮಾಂಡ್‌ ಸೂಚನೆ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ನುಡಿದರು.
ಆಡಳಿತದಲ್ಲಿ ಪಾರದರ್ಶಕತೆಯ ಕಡೆಗೆ ಹೆಚ್ಚು ಒತ್ತು ನೀಡಲಾಗಿದೆ. ಕಳೆದ ಮೂರು ವರ್ಷಗಳ ಆಡಳಿತ ತನಗೆ ತೃಪ್ತಿ ನೀಡಿದೆ. ಜನತೆಗೆ ನೀಡಲಾಗಿದ್ದ  160 ಭರವಸೆಗಳ ಪೈಕಿ 120ನ್ನು ಈಡೇರಿಸಲಾಗಿದೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News