×
Ad

ಪುತ್ತೂರು ತಾಲೂಕು ಕಚೇರಿಯಲ್ಲಿ ಬಸವ ಜಯಂತಿ ಆಚರಣೆ

Update: 2016-05-09 18:12 IST

ಪುತ್ತೂರು, ಮೇ 9: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮೇ 9ರಂದು ಮಿನಿವಿಧಾನ ಸೌಧದಲ್ಲಿರುವ ತಾಲೂಕು ಕಚೇರಿಯಲ್ಲಿ ಬಸವ ಜಯಂತಿ ಆಚರಣೆ ನಡೆಯಿತು.

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ, ತಹಶೀಲ್ದಾರ್ ಸಣ್ಣರಂಗಯ್ಯ ಬಸವಣ್ಣರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಉಪತಹಶೀಲ್ದಾರ್ ಶ್ರೀಧರ್ ಕೆ. ಬಸವಣ್ಣನವರ ಜೀವನ ಚರಿತ್ರೆಯ ಕುರಿತು ಮಾತನಾಡಿದರು.

ಉಪತಹಶೀಲ್ದಾರ್ ಶಶಿಕಲಾ, ಕಂದಾಯ ನಿರೀಕ್ಷಕ ದಯಾನಂದ್, ನಾಗೇಶ್, ಸಿಬಂದಿಯಾದ ಉಷಾ, ನಿಶಾಮಣಿ, ರಾಧಾಕೃಷ್ಣ ಸೇರಿದಂತೆ ಎಲ್ಲಾ ಸಿಬಂದಿ ಉಪಸ್ಥಿತರಿದ್ದರು.

ಉಪ್ಪಿನಂಗಡಿಯ ಕಂದಾಯ ನಿರೀಕ್ಷಕ ಮಂಜುನಾಥ್ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News